ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಮೂರ್ತಿಗಳ ನೇಮಕ ಸರ್ಕಾರದ ಮನವಿ

Last Updated 16 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸುಪ್ರೀಂಕೋರ್ಟ್‌ಗೆ ನೇಮಕಗೊಂಡಿರುವ ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ವಿಕ್ರಮ್‌ಜಿತ್ ಸೇನ್, ಒಡಿಶಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಹಾಗೂ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಂ.ವೈ. ಇಕ್ಬಾಲ್ ಅವರ ನೇಮಕ ಪ್ರಕ್ರಿಯೆ ಕುರಿತು ಈಗ ಗೊಂದಲ ಉದ್ಭವಿಸಿದೆ.

ಸುಪ್ರೀಂಕೋರ್ಟ್‌ಗೆ ನೇಮಕ ಮಾಡಲು ಮೂವರು ಹಿರಿಯ ನ್ಯಾಯಮೂರ್ತಿಗಳ ಹೆಸರು ಶಿಫಾರಸು ಮಾಡಿರುವ ನಿರ್ಧಾರವನ್ನು ಪುನರ್‌ಪರಿಶೀಲನೆ ಮಾಡುವಂತೆ ಕೇಂದ್ರ ಸರ್ಕಾರ, ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳ ನೇಮಕಾತಿ ಸಮಿತಿಗೆ ಮನವಿ ಮಾಡಿಕೊಂಡಿದೆ.

ಆದರೆ, ಯಾವ ಕಾರಣದಿಂದ ಕೇಂದ್ರ ಸರ್ಕಾರ ಈ ಮೂವರ ಹೆಸರನ್ನು ವಾಪಸು ಕಳುಹಿಸಿದೆ ಎಂಬುದು ಗೊತ್ತಾಗಿಲ್ಲ. ನ್ಯಾಯಮೂರ್ತಿಗಳ ನೇಮಕಾತಿ ಸಮಿತಿ ಇವರ ಹೆಸರನ್ನು ವಾಪಸು ಕಳುಹಿಸಿದಲ್ಲಿ ಆಗ ಸರ್ಕಾರ ನೇಮಕಾತಿಯನ್ನು ಅಂಗೀಕರಿಸಲೇಬೇಕಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT