ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಸಮ್ಮತ ಮತದಾನಕ್ಕೆ ಪ್ರತಿಜ್ಞೆ

Last Updated 9 ಏಪ್ರಿಲ್ 2013, 8:54 IST
ಅಕ್ಷರ ಗಾತ್ರ

ಕಾರವಾರ: `ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ನೋಂದಾಯಿಸಿರುವ ಯುವ ಮತದಾರರಿಗೆ ಮತದಾನ ಪ್ರಕ್ರಿಯೆ ಕುರಿತು ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ನೀಡಬೇಕು' ಎಂದು ಕ್ಷೇತ್ರ ಪ್ರಚಾರ ಅಧಿಕಾರಿ ತುಕರಾಮ ಗೌಡ ಹೇಳಿದರು.

ಕ್ಷೇತ್ರ ಪ್ರಚಾರ ನಿರ್ದೇಶನಾಲಯ ನಗರದ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಕಚೇರಿಯಲ್ಲಿ ಸೋಮವಾರ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಆಯೋಜಿಸಲಾಗಿದ್ದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. `ಈ ಬಾರಿ ಹೊಸದಾಗಿ ಸಾಕಷ್ಟು ಸಂಖ್ಯೆಯಲ್ಲಿ ಯುವ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿದ್ದಾರೆ. ಅವರಿಗೆ ಸೂಕ್ತ ತರಬೇತಿಯನ್ನು ಅಂಗನವಾಡಿ ಕಾರ್ಯಕರ್ತೆಯರು ಮಾಡಬೇಕಿದ್ದು, ಮತದಾರರ ಜಾಗೃತಿ ಪ್ರತಿಯೊಬ್ಬರ ಕರ್ತವ್ಯವಾಗಿದೆ' ಎಂದು ಹೇಳಿದರು.

`ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರಮುಖ ಅಂಶವಾಗಿದ್ದು, ಮತದಾರರಿಗೆ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಇದಾಗಿದೆ. ಇದನ್ನು ಯಾವುದೇ ಆಮಿಷಗಳಿಗೆ ಒಳಗಾಗದೆ ನಿರ್ವಹಿಸಬೇಕಾಗಿದೆ' ಎಂದು ಅವರು ನುಡಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ನಿರೂಪಣಾಧಿಕಾರಿ ಎಲ್.ಕೆ.ದೇಶಪಾಂಡೆ ಮಾತನಾಡಿ, `ಮತದಾನ ಕೇವಲ ಕರ್ತವ್ಯ ಮಾತ್ರವಲ್ಲದೆ ಪ್ರತಿಯೊಬ್ಬರಿಗೆ ಸಂವಿಧಾನ ನೀಡಿರುವ ನೈತಿಕ ಹಕ್ಕಾಗಿದೆ. ಈ ಹಕ್ಕನ್ನು ಮುಕ್ತವಾಗಿ ಚಲಾಯಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಉತ್ತಮ ಅಭ್ಯರ್ಥಿಗಳನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿಕೊಳ್ಳುವ ಮೂಲಕ ತಮ್ಮ ಹಕ್ಕನ್ನು ಸಮರ್ಪಕವಾಗಿ ಚಲಾಯಿಸಬೇಕು' ಎಂದರು.

ಶಿಶು ಅಭಿವೃದ್ಧಿ ಅಧಿಕಾರಿ ಎಲ್.ಎಲ್. ರಾಠೋಡ್ ಮಾತನಾಡಿ, `ಚುನಾವಣೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಬಾರದು.  ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾತ್ರ ಮಾಡಬೇಕು' ಎಂದು ಹೇಳಿದರು.

ಮುಕ್ತ ಹಾಗೂ ನ್ಯಾಯಸಮ್ಮತ ರೀತಿಯಲ್ಲಿ ಮತದಾನ ಮಾಡುವ ಬಗ್ಗೆ ಸಭೆಯಲ್ಲಿ ಪ್ರತಿಜ್ಞೆ ಸ್ವೀಕರಿಸಲಾಯಿತು.ಕ್ಷೇತ್ರ ಪ್ರಚಾರ ಸಹಾಯಕ ವಿ.ಲಕ್ಷ್ಮೀಕಾಂತ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT