ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಾಂಗ ನಿಂದನೆ ಆಗುವುದಿಲ್ಲ

Last Updated 8 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ರಾಜ್ಯ ಸರ್ಕಾರ, ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸಿರುವುದು ನ್ಯಾಯಾಂಗ ನಿಂದನೆ ಆಗುವುದಿಲ್ಲ~ ಎಂಬುದು ಕಾನೂನು ತಜ್ಞರ ಅಭಿಮತ.

`ಇದೇ 15ರ ವರೆಗೆ ನಿತ್ಯ 9,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನದಿ ಪ್ರಾಧಿಕಾರ (ಸಿಆರ್‌ಎ) ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಇದನ್ನು ಪಾಲಿಸುವಂತೆ ಸುಪ್ರೀಂ ಕೋರ್ಟ್ ಮೌಖಿಕ ಸೂಚನೆ ನೀಡಿತ್ತು. ಆದರೆ, ಅದು ಲಿಖಿತ ರೂಪದ ಆದೇಶ ಆಗಿರಲಿಲ್ಲ. ಹೀಗಾಗಿ ನೀರು ಬಿಡಲು ಆಗುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿರುವುದು ನ್ಯಾಯಾಂಗ ನಿಂದನೆ ಆಗುವುದಿಲ್ಲ~ ಎನ್ನುತ್ತಾರೆ ರಾಜ್ಯದ ಮಾಜಿ ಅಡ್ವೊಕೇಟ್ ಜನರಲ್ ಬಿ.ವಿ.ಆಚಾರ್ಯ.

`ಸಿಆರ್‌ಎ ಆದೇಶದಂತೆ ಇದುವರೆಗೂ ನೀರು ಬಿಡಲಾಗಿದೆ. ಮಳೆ ಕಡಿಮೆಯಾಗಿರುವ ಕಾರಣ ಸಂಕಷ್ಟ ಸ್ಥಿತಿ ಎದುರಾಗಿದೆ. ಇಂತಹ ಸಂದರ್ಭದಲ್ಲಿ ನೀರು ಬಿಡುವುದು ಕಷ್ಟ ಎಂದು ಕೋರ್ಟ್‌ಗೆ ಹೇಳಿರುವುದರಲ್ಲಿ ತಪ್ಪೇನೂ ಇಲ್ಲ. ಇದು ನ್ಯಾಯಾಂಗ ನಿಂದನೆ ಆಗುವುದಿಲ್ಲ~ ಎಂದರು. ಮತ್ತೊಬ್ಬ ಮಾಜಿ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ಅವರೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದರು.


 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT