ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಾಲಯದಿಂದ ನ್ಯಾಯಾಲಯಕ್ಕೆ ಬಸ್ ಸೇವೆ

Last Updated 6 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು:  ನ್ಯಾಯಾಲಯದಿಂದ ನ್ಯಾಯಾಲಯಕ್ಕೆ ಸಂಚರಿಸುವ ವಕೀಲ ಮತ್ತು ಕಕ್ಷಿದಾರರ ಅನುಕೂಲಕ್ಕಾಗಿ ಬಿಎಂಟಿಸಿಯು ಸೋಮವಾರ ಬಸ್ ಸೇವೆಯನ್ನು ವಿಧ್ಯುಕ್ತವಾಗಿ ಆರಂಭಿಸಿತು.  

  ನಗರದ ಮೆಯೋಹಾಲ್  ಕೋರ್ಟ್‌ನಲ್ಲಿ ನಡೆದ ಸಮಾರಂಭದಲ್ಲಿ ಬಸ್ ಸೇವೆಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದ ಬಿಎಂಟಿಸಿ ಉಪಾಧ್ಯಕ್ಷ ಎಂ.ಕೃಷ್ಣಪ್ಪ, `ಬಿಎಂಟಿಸಿಯು ನೀಡುತ್ತಿರುವ ಉತ್ತಮ ಸೇವೆಯಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆಯುತ್ತಿದೆ ಎಂದರು.

ಈ ಸಾರಿಗೆ ಸೌಲಭ್ಯದಿಂದ ವಕೀಲರು ಮತ್ತು ಕಕ್ಷಿದಾರರು ಸ್ವಂತ ವಾಹನಗಳನ್ನು ಅವಲಂಬಿಸುವುದು ತಪ್ಪಲಿದೆ. ಅಲ್ಲದೆ, ನಗರದಲ್ಲಿ ಸುಗಮ ವಾಹನಗಳ ಸಂಚಾರಕ್ಕೆ ಅನುಕೂಲವಾಗಲಿದೆ~ ಎಂದು ಅವರು ಹೇಳಿದರು.

`ಮುಂದಿನ ದಿನಗಳಲ್ಲಿ ಯುರೋ-4 ಹವಾನಿಯಂತ್ರಿತ ಬಸ್‌ಗಳನ್ನು ಪೂರೈಸಲಾಗುವುದು~ ಎಂದು ಅವರು ಭರವಸೆ ನೀಡಿದರು.  ಸದ್ಯಕ್ಕೆ ಈ ಮೂರು ಬಸ್‌ಗಳು ಮೆಯೋ ಹಾಲ್, ನಗರ ಸಿವಿಲ್ ನ್ಯಾಯಾಲಯ, ಕೌಟುಂಬಿಕ ನ್ಯಾಯಾಲಯ ಮತ್ತು ಹೈಕೋರ್ಟ್‌ಗಳ ನಡುವೆ ಸಂಚರಿಸಲಿವೆ.  ನ್ಯಾಯಾಧೀಶ ಆರ್.ಬಿ.ಬೂದಿಹಾಳ್, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಕೆ.ಎನ್. ಸುಬ್ಬಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಎ.ಪಿ.ರಂಗನಾಥ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT