ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಪಂಚಮಸಾಲಿ' 2ಎ ವರ್ಗಕ್ಕೆ ಸೇರಿಲು ಒತ್ತಾಯ

Last Updated 5 ಡಿಸೆಂಬರ್ 2012, 19:32 IST
ಅಕ್ಷರ ಗಾತ್ರ

ಬೆಂಗಳೂರು: `ರಾಜ್ಯದಲ್ಲಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಪಂಚಮಸಾಲಿ ಸಮುದಾಯವನ್ನು 2ಎ ವರ್ಗಕ್ಕೆ ಸೇರಿಸಬೇಕು' ಎಂದು ರಾಜ್ಯ ವೀರಶೈವ ಪಂಚಮಸಾಲಿ ಸಂಘದ ಅಧ್ಯಕ್ಷ ಬಸವರಾಜ ದಿಂಡೂರ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, `ಪಂಚಮಸಾಲಿ ಸಮುದಾಯವು 80 ಲಕ್ಷ ಜನಸಂಖೆಯನ್ನು ಹೊಂದಿದ್ದರೂ, ಮೀಸಲಾತಿ ಸಿಗದೇ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದೆ' ಎಂದರು.

`ಪಂಚಮಸಾಲಿ ಸಮುದಾಯವನ್ನು 2ಎ ವರ್ಗಕ್ಕೆ ಸೇರಿಸಿ ತಮಿಳುನಾಡು, ಉತ್ತರಪ್ರದೇಶ, ಬಿಹಾರ ರಾಜ್ಯಗಳ ಮಾದರಿಯ ಮೀಸಲಾತಿಯನ್ನು ಕಲ್ಪಿಸಬೇಕು' ಎಂದು ಒತ್ತಾಯಿಸಿದರು.

`ಸಮುದಾಯವು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಡಿಸೆಂಬರ್ 25ರಂದು ಹರಿಹರದಲ್ಲಿ ನಡೆಯಲಿರುವ ವಾರ್ಷಿಕ ಸಮ್ಮೇಳನದಲ್ಲಿ ಚರ್ಚಿಸಲಾಗುವುದು' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT