ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಾಯಿತಿಗೊಂದು ಮಾದರಿ ಶಾಲೆ ಸ್ವಾಗತಾರ್ಹ

Last Updated 15 ಜುಲೈ 2013, 19:59 IST
ಅಕ್ಷರ ಗಾತ್ರ

ಸರ್ಕಾರವು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮಾದರಿ ಶಾಲೆಯನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಯೋಚಿಸುತ್ತಿರುವುದು ಸ್ವಾಗತಾರ್ಹ.

ಪ್ರಸ್ತುತ 6-18 ವರ್ಷ ವಯೋಮಿತಿಯೊಳಗಿನ ಎಲ್ಲಾ ಮಕ್ಕಳಿಗೂ ಗುಣಾತ್ಮಕ ಶಿಕ್ಷಣ ನೀಡುವುದು ಸರ್ಕಾರದ ಗುರಿ. ಪ್ರಸ್ತುತ ಸರ್ಕಾರಿ ಶಾಲೆಗಳ ಸ್ಥಿತಿ- ಗತಿಯನ್ನು ಗಮನಿಸಿದರೆ ಗುಣಾತ್ಮಕ ಶಿಕ್ಷಣ ನೀಡುವ ನಿಟ್ಟಿನಲ್ಲಿ ನಮ್ಮ ಪಯಣ ಆಮೆಗತಿಯ ಓಟದಂತೆ ಇದೆ.

ಏಕೋಪಾಧ್ಯಾಯ ಶಾಲೆಗಳಲ್ಲಿ 1ರಿಂದ 5ನೇ ತರಗತಿಯವರೆಗೆ ಒಬ್ಬರೇ ಶಿಕ್ಷಕರು ಬೋಧಿಸುತ್ತಿದ್ದಾರೆ. ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ (1-7) ಒಬ್ಬ ಅಥವಾ ಇಬ್ಬರು ಶಿಕ್ಷಕರಿದ್ದು, ಪ್ರಯೋಗಾಲಯ, ಕ್ರೀಡಾಂಗಣ ಮುಂತಾದ ಮೂಲಭೂತ ಸೌಕರ್ಯಗಳ ಕೊರತೆಗಳನ್ನು ಎದುರಿಸುತ್ತಿವೆ.

ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಮಾದರಿ ಶಾಲೆ ಪ್ರಾರಂಭಿಸಿ, ಆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಮಕ್ಕಳು ಆ ಶಾಲೆಗೆ ದಾಖಲಾಗುವ ಜೊತೆಗೆ ಗುಣಾತ್ಮಕ ಶಿಕ್ಷಣ ಪಡೆಯುವಂತಾಗಬೇಕೆಂಬುದು ಶಿಕ್ಷಕರ ಕೂಗು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT