ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂದ್ಯದ ದಿನದಂದು ಮಾರ್ಗ ಬದಲಾವಣೆ

Last Updated 25 ಫೆಬ್ರುವರಿ 2011, 18:00 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ (ಫೆ.27) ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ವಿಶ್ವಕಪ್ ಕ್ರಿಕೆಟ್ ಪಂದ್ಯ ನಡೆಯುವ ಹಿನ್ನೆಲೆಯಲ್ಲಿ ಸುತ್ತಮುತ್ತಲ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪರ್ಯಾಯ ರಸ್ತೆಗಳಲ್ಲಿ ಸಂಚರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.ಪಂದ್ಯದ ಹಿನ್ನೆಲೆಯಲ್ಲಿ ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 10.30ರವರೆಗೆ ಈ ಕೆಳಕಂಡ ರಸ್ತೆಗಳಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ.

ಕ್ವೀನ್ಸ್ ರಸ್ತೆಯ ಸಿ.ಟಿ.ಓ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ, ಎಂ.ಜಿ.ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ, ಚಿನ್ನಸ್ವಾಮಿ ಕ್ರೀಡಾಂಗಣದ ಕಾಂಪೌಂಡ್‌ಗೆ ಹೊಂದಿಕೊಂಡಂತಿರುವ ರಸ್ತೆ, ಸೆಂಟ್ರಲ್ ಸ್ಟ್ರೀಟ್‌ನ ರಸ್ತೆಯ ಎರಡು ಬದಿಗಳಲ್ಲಿ ವಾಹನ ನಿಲ್ಲಿಸುವಂತಿಲ್ಲ.

ಲಿಂಕ್ ರಸ್ತೆಯಲ್ಲಿ ಎಂ.ಜಿ.ರಸ್ತೆಯಿಂದ ಕಬ್ಬನ್ ರಸ್ತೆವರೆಗೆ, ಮದ್ರಾಸ್ ಬ್ಯಾಂಕ್ ರಸ್ತೆಯಲ್ಲಿ ಎಸ್.ಬಿ.ಐ ವೃತ್ತದಿಂದ ಆಶೀರ್ವಾದಂ ವೃತ್ತದವರೆಗೆ, ಮ್ಯೂಸಿಯಂ ರಸ್ತೆಯಲ್ಲಿ ಎಂ.ಜಿ.ರಸ್ತೆಯಿಂದ ಮದ್ರಾಸ್ ಬ್ಯಾಂಕ್ ರಸ್ತೆವರೆಗೆ ಹಾಗೂ ರೆಸಿಡೆನ್ಸಿ ರಸ್ತೆವರೆಗೆ, ಕಸ್ತೂರಬಾ ರಸ್ತೆಯಲ್ಲಿ ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ ಮತ್ತು ಗ್ರ್ಯಾಂಡ್ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ರಾಜಾರಾಮ್‌ಮೋಹನ್ ರಾಯ್ ವೃತ್ತದವರೆಗೆ ವಾಹನ ನಿಲುಗಡೆಗೆ ಅವಕಾಶವಿಲ್ಲ.

ಕಬ್ಬನ್ ರಸ್ತೆಯಲ್ಲಿ ಬಿ.ಆರ್.ವಿ ವೃತ್ತದಿಂದ ಡಿಕೆನ್ಸನ್ ರಸ್ತೆ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಕಡೆ, ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್‌ನಿಂದ ಡಿಕೆನ್ಸನ್ ರಸ್ತೆ ಜಂಕ್ಷನ್‌ವರೆಗೆ ಬಿಎಂಟಿಸಿ ಬಸ್‌ಗಳನ್ನು ಹೊರತುಪಡಿಸಿ ಇತರೆ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ.

ನಿಲುಗಡೆಗೆ ಅವಕಾಶ: ಕೆಎಸ್‌ಸಿಎ ಸದಸ್ಯರು ಮತ್ತು ಪಂದ್ಯ ವೀಕ್ಷಣೆಗೆ ಬರುವವರು ಕಡ್ಡಾಯವಾಗಿ ಕಂಠೀರವ ಕ್ರೀಡಾಂಗಣದ ಒಳ ಭಾಗದಲ್ಲಿ ವಾಹನಗಳನ್ನು ನಿಲ್ಲಿಸಬೇಕು. ಶಿವಾಜಿನಗರ ಬಸ್ ನಿಲ್ದಾಣದ ಒಂದನೇ ಮಹಡಿಯಲ್ಲಿ ವಾಹನ ನಿಲುಗಡೆಗೆ ಅವಕಾಶ ನೀಡಲಾಗಿದೆ. ಕ್ರೀಡಾಂಗಣದ ಸುತ್ತಮುತ್ತ ಭದ್ರತಾ ಕಾರ್ಯಕ್ಕೆ ನಿಯೋಜನೆಗೊಂಡ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಿ.ಆರ್.ವಿ ಮೈದಾನದಲ್ಲಿ ವಾಹನ ನಿಲ್ಲಿಸಬೇಕು.

ಎಂ.ಜಿ.ರಸ್ತೆ, ಸಿ.ಟಿ.ಓ ವೃತ್ತ ಮತ್ತು ಬಿ.ಆರ್.ವಿ ಮೈದಾನದಲ್ಲಿ ಮೆಟ್ರೊ ರೈಲು ಕಾಮಗಾರಿ ನಡೆಯುತ್ತಿರುವುದರಿಂದ ಸುತ್ತಮುತ್ತಲ ಪ್ರದೇಶದಲ್ಲಿ ವಾಹನ ನಿಲುಗಡೆಗೆ ಸ್ಥಳಾವಕಾಶದ ಕೊರತೆ ಇದೆ. ಆದ್ದರಿಂದ ಪಂದ್ಯ ವೀಕ್ಷಣೆಗೆ ಬರುವವರು ಸಾಧ್ಯವಾದಷ್ಟು ಬಿಎಂಟಿಸಿ ಬಸ್‌ಗಳಲ್ಲಿ ಸಂಚರಿಸಬೇಕು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT