ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷ ಸಂವರ್ಧನೆಗೆ ರಾಹುಲ್ ಹೊಸ ತಂತ್ರ

Last Updated 21 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪಕ್ಷದ ಕಾರ್ಯಚಟುವಟಿಕೆಗಳನ್ನು ಚುರುಕು ಗೊಳಿಸಲು ಮುಂದಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಾರ್ಯದರ್ಶಿಗಳಿಗೆ ‘ತಿಂಗಳ ನಿರ್ವಹಣಾ ವ್ಯವಸ್ಥೆ’ ಎಂಬ ಹೊಸ ತಂತ್ರವನ್ನು ಪರಿಚಯಿಸಿದ್ದಾರೆ.

ಮುಂಬರುವ ಐದು ರಾಜ್ಯಗಳ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ  ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.

ಹೊಸ ವ್ಯವಸ್ಥೆ ಅನ್ವಯ, ಎಲ್ಲಾ ಎಐಸಿಸಿ  ಕಾರ್ಯದರ್ಶಿಗಳು ತಮ್ಮ ವ್ಯಾಪ್ತಿಯ ರಾಜ್ಯ, ಜಿಲ್ಲಾ ಹಾಗೂ ಬ್ಲಾಕ್ ಮಟ್ಟದಲ್ಲಿ ನಡೆದಿರುವ ಪಕ್ಷಕ್ಕೆ ಸಂಬಂಧಿಸಿದ ಕಾರ್ಯಚಟುವಟಿಕೆಗಳ ವರದಿಯನ್ನು ಪ್ರತಿ ತಿಂಗಳು 10ರಂದು ಕಾಂಗ್ರೆಸ್ ಉಪಾಧ್ಯಕ್ಷರಿಗೆ ಕಳುಹಿಸಬೇಕಾಗಿದೆ.

ಕೋರ್ಟ್‌ಗೆ ಶರಣಾದ ಹರಿಯಾಣ ಶಾಸಕರು
ಚಂಡೀಗಡ (ಐಎಎನ್‌ಎಸ್‌):
ಕರಮ್‌ ಸಿಂಗ್‌ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹರಿಯಾಣದ ಶಾಸಕರಿಬ್ಬರು ಪಂಚಕುಲದ ಸಿಬಿಐ ನ್ಯಾಯಾಲಯದ ಮುಂದೆ ಶನಿವಾರ ಶರಣಾದರು.

ಒ.ಪಿ.ಜೈನ್‌ ಮತ್ತು ಜಿಲೆ ರಾಮ್ ಶರ್ಮ ಶರಣಾದ ಶಾಸಕರು. ಈ ಇಬ್ಬರೂ ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಜಾಮೀನು ನಿರಾಕರಿಸಿದ್ದ ನ್ಯಾಯಾಲಯ, ಒಂದು ವಾರದೊಳಗೆ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗಲು ಆದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT