ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಠ್ಯಕ್ರಮದಲ್ಲಿ ಭಗವದ್ಗೀತೆ : ತಜ್ಞರ ಜತೆ ಚರ್ಚಿಸಿ ನಿರ್ಧಾರ

Last Updated 9 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು:  `ಭಗವದ್ಗೀತೆಯನ್ನು ಶಾಲಾ ಪಠ್ಯಕ್ರಮದಲ್ಲಿ ಅಳವಡಿಸುವ ಸಂಬಂಧ ಶಿಕ್ಷಣ ತಜ್ಞರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿದರು.

ನಗರದಲ್ಲಿ ಸೋಮವಾರ ಆರಂಭವಾದ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ಸಂಬಂಧ ಸದ್ಯದಲ್ಲೇ ಶಿಕ್ಷಣ ತಜ್ಞರೊಂದಿಗೆ ಸಭೆ ನಡೆಸಿ ಚರ್ಚಿಸಲಾಗುತ್ತದೆ. ಸಭೆಯಲ್ಲಿ ಮೂಡುವ ಅಭಿಪ್ರಾಯ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ~ ಎಂದು ತಿಳಿಸಿದರು.

ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಅಳವಡಿಸುವ ಮೂಲಕ ಸರ್ಕಾರ ಶಿಕ್ಷಣ ವ್ಯವಸ್ಥೆಯನ್ನು ಕೇಸರೀಕರಣಗೊಳಿಸಲು ಪ್ರಯತ್ನಿಸುತ್ತಿದೆಯೇ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, `ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ~ ಎಂದರು. ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲಗಳಿವೆ. ಆ ಗೊಂದಲಗಳು ನಿವಾರಣೆಯಾದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸದಾನಂದಗೌಡ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT