ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಠ್ಯದಲ್ಲಿ ವಿಮೋಚನಾ ಇತಿಹಾಸ ಅಳವಡಿಕೆಗೆ ಯತ್ನ

Last Updated 7 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಗುಲ್ಬರ್ಗ: ಹೈದರಾಬಾದ್ ಕರ್ನಾಟಕದಲ್ಲಿ ನಡೆದ ಸ್ವಾತಂತ್ರ್ಯ ಹಾಗೂ ವಿಮೋಚನಾ ಹೋರಾಟದ ಇತಿಹಾಸಗಳನ್ನು ದಾಖಲಿಸಿದ ಬಳಿಕ ಪಠ್ಯಕ್ರಮದಲ್ಲಿ ಅಳವಡಿಸಲು ಯತ್ನಿಸಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಹೇಳಿದರು.

ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಘಟಕವು ನಗರದ ಕನ್ನಡ ಭವನದಲ್ಲಿ ಭಾನುವಾರ ಆಯೋಜಿಸಿದ್ದ ~ಹೈದರಾಬಾದ್ ವಿಮೋಚನಾ ಹೋರಾಟ~ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 371ನೇ ವಿಧಿ ತಿದ್ದುಪಡಿ, ಗುಲ್ಬರ್ಗದಲ್ಲಿ ರೈಲ್ವೆ ವಿಭಾಗ ಸ್ಥಾಪನೆ, ರಾಯಚೂರಿನಲ್ಲಿ ಐಐಟಿ (ಭಾರತೀಯ ತಂತ್ರಜ್ಞಾನ ಸಂಸ್ಥೆ), ಕಾಯಂ ಹೈಕೋರ್ಟ್ ಪೀಠ ಸ್ಥಾಪನೆ ಮತ್ತಿತರ ಕನಸುಗಳನ್ನು  ನಾವು ನನಸು ಮಾಡಬೇಕಾಗಿದೆ ಎಂದರು.

ಗುಲ್ಬರ್ಗ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಆರ್.ಬಿ. ಮಾಲಿಪಾಟೀಲ, ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಶಿವಾನಂದ ಮಾನಕರ, ಗುಲ್ಬರ್ಗ ವಿವಿ ಕುಲಸಚಿವ (ಮೌಲ್ಯಮಾಪನ) ಡಾ.ಡಿ.ಬಿ. ನಾಯಕ, ಗುಲ್ಬರ್ಗ ವಿವಿ ಕನ್ನಡ ಅಧ್ಯಯನ ಸಂಸ್ಥೆ ಪ್ರಾಧ್ಯಾಪಕ ಡಾ.ಬಸವರಾಜ ಸಬರದ, ಹೈದರಾಬಾದ್ ವಿಮೋಚನಾ ಹೋರಾಟಗಾರರಾದ ಶಂಕರೆಪ್ಪ ಚಳಗೇರಿ, ಮಾಣಿಕಪ್ಪಾ ಜಿ. ಪಾಟೀಲ್, ಲೇಖಕ ಡಾ. ಹನುಮಂತರಾವ ದೊಡ್ಡಮನಿ, ಸೂಗಯ್ಯ ಹಿರೇಮಠ ಇದ್ದರು. ಶ್ರೀಶೈಲ ನಾಗರಾಳ ನಿರೂಪಿಸಿದರು. ಡಾ. ಬಸವರಾಜ ಪೊಲೀಸ್ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT