ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಿ'

Last Updated 19 ಡಿಸೆಂಬರ್ 2012, 7:00 IST
ಅಕ್ಷರ ಗಾತ್ರ

ಹಾಸನ: `ಪಠ್ಯೇತರ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿ ರಾಷ್ಟ್ರೀಯ ಭಾವೈಕ್ಯ ಮೂಡಿಸಲು ಸಾಧ್ಯ' ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಅಂಬಿಕಾ ರಾಮಕೃಷ್ಣ ನುಡಿದರು.

ಜಿಲ್ಲಾ ಪಂಚಾಯತಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ವಾಸವಿ ಪ್ರೌಢಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. `ಪ್ರತಿಯೊಂದು ಮಗುವಿನಲ್ಲೂ ಒಂದಿಲ್ಲೊಂದು ಪ್ರತಿಭೆ ಅಡಗಿರುತ್ತದೆ. ಅದನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ.

ಪೋಷಕರು ಕೇವಲ ಪಠ್ಯವನ್ನು ಅಭ್ಯಾಸ ಮಾಡುವಂತೆ ಮಕ್ಕಳ ಮೇಲೆ ಒತ್ತಡ ಹಾಕದೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಕೊಳ್ಳುವಂತೆ ಪ್ರೇರಣೆ ನೀಡಬೇಕು. ಆಸಕ್ತಿ ಇರುವ ಕ್ಷೇತ್ರದಲ್ಲಿ ಮುಂದುವರಿಯುವಂತೆ ಅವರನ್ನು ಪ್ರೋತ್ಸಾಹಿಸಿದರೆ ಅವರು ಉತ್ತಮ ಸಾಧನೆ ಮಾಡುತ್ತಾರೆ' ಎಂದರು.

ನಗರಸಭೆ ಅಧ್ಯಕ್ಷ ಸಿ.ಆರ್. ಶಂಕರ್ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಎಸ್. ಪ್ರಕಾಶ್, `ಮಕ್ಕಳು ಶಿಕ್ಷಣದತ್ತ ಹೆಚ್ಚಿನ ಗಮನ ಕೊಟ್ಟು ಪಠ್ಯೇತರ ಕಾರ್ಯಕ್ರಮಗಳಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಕ್ಕಳನ್ನು ಸಮಾಜದಲ್ಲಿ ಉತ್ತಮ ನಾಗರಿಕರನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶಿಕ್ಷಕರು ಎಲ್ಲ ಮಕ್ಕಳನ್ನು ತಮ್ಮ ಮಕ್ಕಳೆಂಬಂತೆ ಪೋಷಿಸಬೇಕು' ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಪುಟ್ಟರಾಜು, ವಾಸವಿ ಶಾಲೆಯ ಮುಖ್ಯ ಶಿಕ್ಷಕಿ ಶೀಲಾ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಹನುಂತೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT