ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಡಿತರ ಚೀಟಿಯೊಂದಿಗೆ ವಿದ್ಯುತ್ ಮೀಟರ್ ಸಂಖ್ಯೆ ಹೊಂದಿಕೆ

Last Updated 25 ಜನವರಿ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಕಲಿ ಪಡಿತರ ಚೀಟಿದಾರರಿಗೆ ಆಹಾರ ಧಾನ್ಯಗಳನ್ನು ವಿತರಿಸಲು ಸುಮಾರು ರೂ150 ಕೋಟಿ ವೆಚ್ಚವಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವ ದೃಷ್ಟಿಯಿಂದಲೇ ಎಪಿಎಲ್ ಪಡಿತರ ಚೀಟಿಯೊಂದಿಗೆ ವಿದ್ಯುತ್ ಮೀಟರ್ ಸಂಖ್ಯೆಯನ್ನು ಹೊಂದಿಕೆ ಮಾಡಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಪಡಿತರ ಚೀಟಿಯ ಛಾಯಾ ಪ್ರತಿಯೊಂದಿಗೆ ಮನೆಯ ವಿದ್ಯುತ್ ಮೀಟರ್ ಸಂಖ್ಯೆ ಮತ್ತು ಬಿಲ್ ಅನ್ನು ಅಡುಗೆ ಅನಿಲ ಪೂರೈಸುವ ಏಜೆನ್ಸಿಗಳಿಗೆ ಇದೇ 29ರ ಒಳಗೆ ನೀಡಬೇಕು ಎಂದು ಸೂಚಿಸಲಾಗಿತ್ತು. ಕೊನೆಯ ದಿನಾಂಕವನ್ನು ಇನ್ನೂ 10 ದಿನ ವಿಸ್ತರಿಸಲಾಗುವುದು ಎಂದು ಸೋಮವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ರಾಜ್ಯದಲ್ಲಿ 1.25 ಕೋಟಿ ಕುಟುಂಬಗಳಿವೆ. ಆದರೆ ಈಗಾಗಲೇ 1.5 ಕೋಟಿ ಪಡಿತರ ಚೀಟಿಗಳನ್ನು ವಿತರಿಸಲಾಗಿದೆ. ಅಲ್ಲದೆ ಕಾರ್ಡ್ ಇಲ್ಲದವರ ಸಂಖ್ಯೆ ಸುಮಾರು 20 ಲಕ್ಷ ಇದೆ. 35ರಿಂದ 40 ಲಕ್ಷ ಕಾರ್ಡ್‌ಗಳು ಯಾರ ಬಳಿ ಇವೆ ಎಂಬುದು ಪ್ರಶ್ನಾರ್ಥಕವಾಗಿದೆ. ಇದನ್ನು ಪತ್ತೆ ಹಚ್ಚಬೇಕು ಎಂಬ ದೃಷ್ಟಿಯಿಂದಲೇ ಮೀಟರ್ ಸಂಖ್ಯೆಯನ್ನು ಸಂಗ್ರಹ ಮಾಡಲಾಗುತ್ತಿದೆ ಎಂದರು.

ಪಡಿತರ ಚೀಟಿ ಇಲ್ಲದೆ ಇರುವ ಗ್ರಾಹಕರು ಅಡುಗೆ ಅನಿಲದ ಸಂಪರ್ಕ ಸಂಖ್ಯೆ ಮತ್ತು ವಿದ್ಯುತ್ ಮೀಟರ್‌ನ ಸಂಖ್ಯೆಯನ್ನು ನೀಡಬೇಕು. ಗ್ರಾಮೀಣ ಪ್ರದೇಶದಲ್ಲಿ ಪಂಚತಂತ್ರ ಸಾಫ್ಟ್‌ವೇರ್ ತಂತ್ರಜ್ಞಾನವನ್ನು ಬಳಸಿಕೊಂಡು ಆಸ್ತಿ ತೆರಿಗೆ ಪಾವತಿಸಿದ ಮನೆ ನಂಬರ್‌ನೊಂದಿಗೆ ಹಾಗೂ ನಗರ ಪ್ರದೇಶಗಳಲ್ಲಿ ವಿದ್ಯುತ್ ಮೀಟರ್ ಸಂಖ್ಯೆಯೊಂದಿಗೆ ಹೊಂದಿಕೆ ಮಾಡಲಾಗುವುದು ಎಂದು ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT