ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ನಿ, ಮಗಳ ಮೇಲೆ ಹಲ್ಲೆ ಆರೋಪ : ಬಂಧನ

Last Updated 25 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬೆಂಗಳೂರು: ಪತ್ನಿ ಮತ್ತು ಮಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಲ್ಲಿಕಾರ್ಜುನಯ್ಯ (41) ಎಂಬಾತನನ್ನು  ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಮದ್ಯವ್ಯಸನಿಯಾದ ಮಲ್ಲಿಕಾರ್ಜುನಯ್ಯ ಪ್ರತಿನಿತ್ಯ ಪಾನಮತ್ತನಾಗಿ ಮನೆಗೆ ಬಂದು ಪತ್ನಿ ಗೌರಮ್ಮ ಹಾಗೂ ಮಕ್ಕಳ ಜತೆ ಜಗಳವಾಡುತ್ತಿದ್ದ. ಅದೇ ರೀತಿ ಆತ ಸೋಮವಾರ ರಾತ್ರಿ ಪಾನಮತ್ತನಾಗಿ ಬಂದು ಪತ್ನಿಯ ಜತೆ ಜಗಳವಾಡಿದ.

ಈ ವೇಳೆ ಮಧ್ಯ ಪ್ರವೇಶಿಸಿದ 12 ವರ್ಷದ ಮಗಳನ್ನು ಎಳೆದಾಡಿ ಹಲ್ಲೆ ನಡೆಸಿದ್ದಾನೆ.  ಈ ಸಂಬಂಧ ಗೌರಮ್ಮ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಚಂದ್ರಾಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT