ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಪತ್ರಕರ್ತರಿಗೆ ಸಾಮಾಜಿಕ ಜವಾಬ್ದಾರಿ ಅವಶ್ಯ'

Last Updated 3 ಸೆಪ್ಟೆಂಬರ್ 2013, 6:21 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಪತ್ರಕರ್ತರು ಸಾಮಾಜಿಕ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಬೇಕಿದೆ ಎಂದು ಪುಷ್ಪಾಂಡಜ ಮಹರ್ಷಿ ಆಶ್ರಮದ ಪೀಠಾಧ್ಯಕ್ಷ  ದಿವ್ಯಜ್ಞಾನಾನಂದ ಸ್ವಾಮಿ ಹೇಳಿದರು.

ಅವರು ನಗರದ ಕನ್ನಡ ಜಾಗೃತ ಭವನದಲ್ಲಿ ಸುವರ್ಣ ಕರ್ನಾಟಕ ವೃತ್ತಿನಿರತ ಪತ್ರಕರ್ತರ ಸಂಘದ ಉದ್ಘಾಟನಾ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು.

ಮೌಲ್ಯವಿಲ್ಲದ ಸುದ್ದಿಗಳು, ಸಾಮಾಜಿಕ ಸ್ವಾಸ್ಥ್ಯ ಕೆಡಿಸುವ ಬರಹಗಳು ಪತ್ರಿಕೋದ್ಯಮದ ಆಶಯಕ್ಕೆ ದಕ್ಕೆ ತರುತ್ತಿವೆ. ಆದ್ದರಿಂದ ಪತ್ರಕರ್ತರಿಗೆ ಸಾಮಾಜಿಕ ಹೊಣೆಗಾರಿಕೆ ಅಗತ್ಯ ಎಂದರು.

ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಮಾತನಾಡಿ, `ಊಹಾಪೋಹ ಸುದ್ದಿಗಳಿಗೆ ಕಡಿವಾಣ ಹಾಕಿ, ಜನತೆಯ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪತ್ರಕರ್ತರು ಕೆಲಸ ಮಾಡಬೇಕಿದೆ. ವ್ಯವಸ್ಥೆಯನ್ನು ಸರಿದಾರಿಗೆ ತರುವಲ್ಲಿ ಪತ್ರಿಕೋದ್ಯಮದ ಪಾತ್ರ ಮಹತ್ವದ್ದು ಎಂದರು.

ಸುವರ್ಣ ಕರ್ನಾಟಕ ವೃತ್ತಿನಿರತ ಪತ್ರಕರ್ತರ ಸಂಘದ ಗೌ.ಅಧ್ಯಕ್ಷ ಆ.ಗು.ಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪಿಎಚ್‌ಡಿ ಪದವಿ ಪಡೆದಿರುವ ಡಾ.ಎ.ಎಸ್.ಚೇತನ್, ಹಿರಿಯ ಪತ್ರಕರ್ತ ಪಿ.ಜಿ.ಸುಬ್ಬರಾವ್, ವಿ.ವಿಮಲಮ್ಮ, ಶಿಕ್ಷಕರಾದ ಎಚ್.ನಟರಾಜ್, ಕೆ.ವಿ.ನಾಗರಾಜ್ ಅವರನ್ನು ಸನ್ಮಾನಿಸಲಾಯಿತು.

ಜಿ.ಪಂ. ಉಪಾಧ್ಯಕ್ಷ ಎನ್.ಹನುಮಂತೇಗೌಡ, ತಾ.ಪಂ.ಅಧ್ಯಕ್ಷ ಡಿ.ನಾಗರಾಜ್, ರಾಜ್ಯ ರೇಷ್ಮೆ ಮಾರಾಟ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ನಗರ ಸಭಾ ಸದಸ್ಯ ಟಿ.ಎನ್.ಪ್ರಭುದೇವ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಪುಷ್ಪಾ ಶಿವಶಂಕರ್, ಸುವರ್ಣ ಕರ್ನಾಟಕ ವೃತ್ತಿನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಜಿ.ಪ್ರಕಾಶ್, ತಾ.ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹ.ರಾಮಕೃಷ್ಣ, ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ಅಗ್ನಿವೆಂಕಟೇಶ್, ಕನ್ನಡ ಪಕ್ಷದ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಸಂಘದ ಪದಾಧಿಕಾರಿಗಳಾದ ಕೃಷ್ಣಮೂರ್ತಿ, ಚಂದ್ರಶೇಖರ್, ಚೌಡರಾಜ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT