ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದವಿ ಕಾಲೇಜು ಉಪನ್ಯಾಸಕರ ಹುದ್ದೆ ಭರ್ತಿ: ಡಿವೈಎಫ್‌ಐ ಆಗ್ರಹ

Last Updated 5 ಜುಲೈ 2013, 19:54 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಆರು ಸಾವಿರ ಉಪನ್ಯಾಸಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳದ ರಾಜ್ಯಸರ್ಕಾರದ ಕ್ರಮವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ಖಂಡಿಸಿದೆ. 

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಫೆಡರೇಷನ್‌ನ ರಾಜ್ಯ ಘಟಕದ ಕಾರ್ಯದರ್ಶಿ ಬಿ.ರಾಜಶೇಖರಮೂರ್ತಿ, `ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ 6 ಸಾವಿರ ಬೋಧಕ ಮತ್ತು 4 ಸಾವಿರ ಬೋಧಕೇತರ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳನ್ನು ಭರ್ತಿ ಮಾಡದೆ 12 ಸಾವಿರ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಹೊರಟಿರುವ ಸರ್ಕಾರದ ಕ್ರಮ ಖಂಡನೀಯ. ಪದವಿ ಕಾಲೇಜುಗಳ ಉಪನ್ಯಾಸಕರ ನೇಮಕಾತಿಯ ನಂತರ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿ ನಡೆಸಲಿ' ಎಂದರು.

`ಪ್ರಾಥಮಿಕ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ಸುಮಾರು 75 ಸಾವಿರ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ನೇಮಕಾತಿ ನಡೆದಿಲ್ಲ.  ಇದರಿಂದ ನಿರುದ್ಯೋಗ ಸೃಷ್ಟಿಯಾಗುತ್ತಿದೆ ಎಂದರು.

ಡಿವೈಎಫ್‌ಐನ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜು ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT