ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದ್ಮನಾಭಸ್ವಾಮಿ ದೇಗುಲದ ಬಿ ನೆಲಮಾಳಿಗೆ ತೆರೆಯಕೂಡದು : ಸುಪ್ರೀಂಗೆ ಮನವಿ

Last Updated 2 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ತಿರುವನಂತಪುರದ ಶ್ರೀ ಪದ್ಮನಾಭ ಸ್ವಾಮಿ ದೇವಸ್ಥಾನದ `ಬಿ~ ನೆಲಮಾಳಿಗೆಯನ್ನು ತೆರೆಯಬಾರದು, ಈಗಾಗಲೇ ಶೋಧಿಸಿರುವ ಅಮೂಲ್ಯ ವಸ್ತುಗಳ ಭಾವಚಿತ್ರ ತೆಗೆಯಬಾರದು ಹಾಗೂ ವಿಡಿಯೊ ಚಿತ್ರೀಕರಣ ಮಾಡಬಾರದು ಎಂದು ತಿರುವಾಂಕೂರು ರಾಜಮನೆತನವು ಶುಕ್ರವಾರ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಮನವಿಯಲ್ಲಿ ಕೋರಿದೆ.

`ಬಿ~ ನೆಲಮಾಳಿಗೆ ತೆರೆಯುವುದು ದೇವಸ್ಥಾನದ ಸಂಪ್ರದಾಯ, ಆಚರಣೆ ಹಾಗೂ ಭಕ್ತರ ಭಾವನೆಗಳಿಗೆ ವಿರುದ್ಧವಾದುದು~ ಎಂದು ನ್ಯಾಯಮೂರ್ತಿಗಳಾದ ಆರ್.ವಿ.ರವೀಂದ್ರನ್ ಹಾಗೂ ಎ.ಕೆ.ಪಟ್ನಾಯಕ್ ಅವರನ್ನೊಳಗೊಂಡ ಪೀಠಕ್ಕೆ ಸಲ್ಲಿಸಿದ ಮನವಿಯಲ್ಲಿ ಹೇಳಲಾಗಿದೆ.

ಸುಪ್ರೀಂಕೋರ್ಟ್ ನೇಮಿಸಿರುವ ಸಮಿತಿಯು ಬಿ~ ನೆಲಮಾಳಿಗೆಯನ್ನು ತೆರೆಯಬೇಕೋ, ಬೇಡವೋ ಎನ್ನುವ ನಿರ್ಧಾರವನ್ನು ದೇವಸ್ಥಾನದ ಪ್ರಧಾನ ಅರ್ಚಕರಿಗೆ ಬಿಟ್ಟಿರುವುದಕ್ಕೆ ಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ಈ ನಡುವೆ ದೇವಸ್ಥಾನದ ಸಂಪತ್ತಿನ ಕುರಿತು ಸ್ಥಳೀಯ ಕೋರ್ಟ್ ಆಯುಕ್ತರ ವರದಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿದೆ. ಇದೇ 12ರಂದು ಕೋರ್ಟ್ ಈ ಸಂಬಂಧದ ವಿಚಾರಣೆ ಕೈಗೆತ್ತಿಕೊಳ್ಳಲಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT