ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿವರ್ತನೆಯಲ್ಲಿ ಶಿಕ್ಷಕರ ಹೊಣೆ ಅಮೂಲ್ಯ

ಕುಂ.ವೀರಭದ್ರಪ್ಪ ಅಭಿಪ್ರಾಯ
Last Updated 24 ಡಿಸೆಂಬರ್ 2013, 9:35 IST
ಅಕ್ಷರ ಗಾತ್ರ

ಖಾನಾಪುರ: ‘ದೇಶಕ್ಕೆ ಉತ್ತಮ ಪ್ರಜೆಗಳನ್ನು ನೀಡುವ ಶಿಕ್ಷಕ ವೃತ್ತಿ ಸಮಾಜವನ್ನು ಒಳ್ಳೆಯ ದಾರಿಯಲ್ಲಿ ನಡೆಸಿಕೊಂಡು ಹೋಗುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸಮಾಜದ ಪರಿವರ್ತನೆಯಲ್ಲಿ ಶಿಕ್ಷಕರ ಪಾತ್ರ ಅತ್ಯಮೂಲ್ಯವಾದುದು’ ಎಂದು ಸಾಹಿತಿ ಹಾಗೂ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪುರಸ್ಕೃತ ಕುಂ.ವೀರಭದ್ರಪ್ಪ ಅಭಿಪ್ರಾಯಪಟ್ಟರು.

ಪಟ್ಟಣದ ಶಾಸಕರ ಮಾದರಿ ಕನ್ನಡ ಪ್ರಾಥಮಿಕ ಶಾಲೆಯ ಡಾ.ಪ್ರಭಾಕರ ಕೋರೆ ಸಭಾಂಗಣದಲ್ಲಿ ನಡೆದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತ ನಾಡಿದರು. ಹಿಂದಿನ ಕಾಲದಲ್ಲಿ ಶಿಕ್ಷಣ ಪದ್ಧತಿ ಶೈಕ್ಷಣಿಕ ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಕೇಂದ್ರೀಕೃತವಾಗಿತ್ತು. ಆದರೆ ಇಂದು ಸರಕಾರದ ವಿವಿಧ ಯೋಜನೆಗಳ ಅನುಷ್ಠಾನದ ತರಾತುರಿ ಯಲ್ಲಿ ಶಿಕ್ಷಕರು ಮಕ್ಕಳ ಶಿಕ್ಷಣದ ಬಗ್ಗೆ ಸಂಪೂರ್ಣ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಶೈಕ್ಷಣಿಕ ವಿಕಸನ ಕುಂಠಿತಗೊಳ್ಳುತ್ತಿದೆ ಎಂಬ ಕಳವಳ ವ್ಯಕ್ತಪಡಿಸಿದರು.

ಸಮಾರಂಭ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿ ಮಠ, ರಾಜ್ಯದ ಗಡಿಭಾಗದಲ್ಲಿ ಮರಾಠಿ ಪ್ರಾಬಲ್ಯದ ಪ್ರದೇಶದಲ್ಲಿರುವ ಕನ್ನಡ ಶಾಲೆಯೊಂದು ಶಾಲೆಯೊಂದು ನೂರು ವಸಂತಗಳನ್ನು ಯಶಸ್ವಿಯಾಗಿ ಪೂರೈಸಿ ಸಂಭ್ರಮ ಪಡುತ್ತಿರುವ ಸಮಾರಂಭದಲ್ಲಿ ಭಾಗವಹಿಸಿದ್ದು ನನಗೆ ಖುಷಿ ತಂದಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸದ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಕ್ರಮವನ್ನು ತೀವ್ರವಾಗಿ ಖಂಡಿಸಿದರು.

ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕೌಜಲಗಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಶಾಸಕ ಅರವಿಂದ ಪಾಟೀಲ ಅಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಅಂತರರಾಷ್ಟ್ರೀಯ ಅಥ್ಲಿಟ್‌ ಅರ್ಜುನ್ ದೇವಯ್ಯ, ಪ್ರಖ್ಯಾತ ವೈದ್ಯೆ ಡಾ.ಸುಶೀಲಾ ಶೇಷಗಿರಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಫಕ್ಕೀರವ್ವ ಗುಡ್ಲಾರ, ಬಿಇಒ ವಿನೋದ ನಾಯ್ಕ, ಬಿಆರ್‌ಸಿ ಸಮನ್ವಯ ಅಧಿಕಾರಿ ಆರ್,ಕೆ ಆಂಜನೇಯ, ಅಕ್ಷರ ದಾಸೋಹದ ಅಧಿಕಾರಿ ಪ್ರಕಾಶ ಡೊಂಬರ, ಕಾಂಗ್ರೆಸ್ ಜಿಲ್ಲಾ  ಘಟಕದ ಉಪಾಧ್ಯಕ್ಷ ಎನ್. ಐ ಕೋಡೊಳಿ, ಕ.ಸಾ.ಪ  ತಾಲ್ಲೂಕು ಘಟಕದ ಅಧ್ಯಕ್ಷ ಜಗದೀಶ ಹೊಸಮನಿ, ಮುಖ್ಯ ಶಿಕ್ಷಕ ಜೆ.ಎ ಚಿಕ್ಕೋಡಿ, ಉದ್ಯಮಿ ಹಾಗೂ ಶಾಲೆಯ ಮಾಜಿ ವಿದ್ಯಾರ್ಥಿ ಜಯರಾಜ ಮಾಕಾವಿ ಮತ್ತಿತರರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು, ಶಾಲೆಯ ಶಿಕ್ಷಕ-ಶಿಕ್ಷಕಿಯರು, ನಾಗರಿಕರು, ಎಸ್ಡಿಎಂಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಾಲೆಯ ಶಿಕ್ಷಕಿಯರು ನಾಡಗೀತೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಿಕ್ಷಕರಾದ ವಿವೇಕ ಕುರಗುಂದ, ಗಿ.ಎಫ್ ಬ್ಯಾಟಗೇರಿ ನಿರೂಪಿಸಿದರು. ಎಸ್ಡಿಎಂಸಿ ಅಧ್ಯಕ್ಷ ರಾಜು ಹೊರಕೇರಿ ಸ್ವಾಗತಿಸಿದರು. ಅಪ್ಪಯ್ಯ ಕೋಡೊಳಿ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಪ್ರಸನ್ನ ಕುಲಕರ್ಣಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT