ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಎಸ್.ಆರ್. ಪಾಟೀಲ

Last Updated 27 ಜೂನ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಎಸ್.ಆರ್.ಪಾಟೀಲ ಅವರು ನೇಮಕಗೊಂಡಿದ್ದಾರೆ.ಮೋಟಮ್ಮ ಅವರಿಂದ ತೆರವಾದ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಲಿಂಗಾಯತ ಸಮುದಾಯದ ಪಾಟೀಲ ಅವರನ್ನು ನೇಮಕ ಮಾಡಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒಪ್ಪಿಗೆ ನೀಡಿದ್ದಾರೆ.

ಅವರ ಆದೇಶದ ಹಿನ್ನೆಲೆಯಲ್ಲಿ ಪಾಟೀಲ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದನಾಯಕ ಸಿದ್ದರಾಮಯ್ಯ ಅವರು ಪರಿಷತ್ತಿನ ಹಂಗಾಮಿ ಸಭಾಪತಿ ಎಂ.ವಿ.ರಾಜಶೇಖರನ್ ಅವರಿಗೆ ಪತ್ರ ಬರೆದಿದ್ದಾರೆ.

ಈ ಪತ್ರವನ್ನು ಆಧರಿಸಿ ಪಾಟೀಲ ಅವರನ್ನು ನಾಯಕರನ್ನಾಗಿ ನೇಮಕ ಮಾಡಿರುವ ಬಗ್ಗೆ ಸಭಾಪತಿ ಗುರುವಾರ ಸದನದಲ್ಲಿ ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT