ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಸರಸ್ನೇಹಿ ಗಣೇಶ ಹಬ್ಬ ಆಚರಣೆ

Last Updated 7 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಗೌರಿ-ಗಣೇಶ ಹಬ್ಬವನ್ನು ಪರಿಸರಪೂರಕವಾಗಿ ಆಚರಿಸುವ ಸಂಕಲ್ಪ ತೊಡಬೇಕು' ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ವಾಮನ ಆಚಾರ್ಯ ಹೇಳಿದರು.

ಬಸವನಗುಡಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌ನಲ್ಲಿ ಶನಿವಾರ ನಡೆದ `ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬದ ಆಚರಣೆ : ಒಂದು ಚಿಂತನೆ' ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

`ಬೆಂಗಳೂರಿನಲ್ಲಿ ಮೊದಲು ಗಣೇಶೋತ್ಸವ ಇಷ್ಟು ಪ್ರಸಿದ್ಧಿಯಾಗಿರಲಿಲ್ಲ. ಪುಣೆ ಮತ್ತು ಕೋಲ್ಕತ್ತದಲ್ಲಿ ಮಾತ್ರ ಸಾರ್ವಜನಿಕವಾಗಿ ದೊಡ್ಡ  ಗಣೇಶ ಮೂರ್ತಿಗಳನ್ನು ಸ್ಥಾಪಿಸಿ ಮೆರವಣಿಗೆಯನ್ನು ವಿಜೃಂಭಣೆಯಿಂದ ಮಾಡುತ್ತಿದ್ದರು. ಆದರೆ, ಈಗ ಬೆಂಗಳೂರಿನಲ್ಲಿಯೂ ಆ ಪ್ರವೃತ್ತಿ ಹೆಚ್ಚಾಗಿ ಬೆಳೆಯುತ್ತಿದೆ' ಎಂದರು.

`ಮಾಲಿನ್ಯ ನಿಯಂತ್ರಣ ಮಂಡಳಿ ಯು ಅನೇಕ ಸಂಘ-ಸಂಸ್ಥೆಗಳ ಜತೆಗೆ ಸೇರಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳ ಬಳಕೆಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ರಾಸಾಯನಿಕ ಬಣ್ಣಗಳಿಂದ ಮಾಡಿದ ಗಣಪತಿ ಮೂರ್ತಿಗಳ ಬಳಕೆಯಿಂದ ಆಗುವ ನಷ್ಟಗಳ ಕುರಿತು ಸಾರ್ವಜನಿಕರಿಗೆ ಮನವರಿಕೆ ಮಾಡಲಾಗಿದೆ' ಎಂದರು.

ಪರಿಸರ ತಜ್ಞ ಅ.ನ. ಯಲ್ಲಪ್ಪರೆಡ್ಡಿ ಮಾತನಾಡಿ, `ಪರಿಸರ ಸ್ನೇಹಿ ಗಣಪತಿಮೂರ್ತಿಗಳ ಬಳಕೆಯಿಂದ ಪರಿಸರದ ಜಲಮೂಲಗಳ ನಾಶವನ್ನು ತಪ್ಪಿಸಬಹುದು. ಎಲ್ಲರೂ ಇದರ ಕಡೆಗೆ ಗಮನ ನೀಡಬೇಕು' ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT