ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ: ಎಲ್ಲ ಸ್ಥಾನಗಳಿಗೆ ಸ್ಪರ್ಧೆ- ಕಾಂಗ್ರೆಸ್ ಸಿದ್ಧತೆ

Last Updated 21 ಮಾರ್ಚ್ 2011, 9:55 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಜೊತೆಗಿನ ಮೈತ್ರಿ ವಿಚಾರದಲ್ಲಿ ಬಿಕ್ಕಟ್ಟು ಮುಂದುವರಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯದ ಎಲ್ಲ 294 ಸ್ಥಾನಗಳಿಗೂ ಸ್ಪರ್ಧಿಸಲು ಸಿದ್ಧತೆ ನಡೆಸಿದೆ.

ಈ ನಿಟ್ಟಿನಲ್ಲಿ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಅಂತಿಮ ಆದೇಶ ನೀಡಲಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಪಕ್ಷದ ವ್ಯವಹಾರಗಳ ಉಸ್ತುವಾರಿ ವಹಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಶಕೀಲ್ ಅಹಮದ್ ಅವರು ಈ ನಿಟ್ಟಿನಲ್ಲಿ ಸ್ಪಷ್ಟ ಸುಳಿವನ್ನು ಸೋಮವಾರ ನೀಡಿದರು.

~ನಾವು ಮೂರು ಪಟ್ಟಿಗಳನ್ನು ಸಿದ್ಧ ಪಡಿಸುತ್ತಿದ್ದೇವೆ. 64 ಸ್ಥಾನಗಳಿಗೆ, 90 ಸ್ಥಾನಗಳಿಗೆ ಮತ್ತು ಎಲ್ಲ 294 ಸ್ಥಾನಗಳಿಗೆ~ ಎಂದು ಅಹಮದ್ ಇಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತಾ ಹೇಳಿದರು.

ಇದೇ ಸಮಯದಲ್ಲಿ ~ಕಾಂಗ್ರೆಸ್ ಮೈತ್ರಿ ಸಾಧ್ಯವಾಗಬೇಕು ಎಂದು ಬಯಸುತ್ತದೆ~ ಎಂದೂ ಅವರು ನುಡಿದರು. ~ಕಾಂಗ್ರೆಸ್ ಈಗಲೂ ಮೈತ್ರಿಯನ್ನು ಬಯಸುತ್ತಿದೆ. ಏನಿದ್ದರೂ ಪಶ್ಚಿಮ ಬಂಗಾಳದ ಪಕ್ಷ ನಾಯಕರು ಈ ವಿಚಾರದಲ್ಲಿ ಕಾಂಗ್ರೆಸ್ ವರಿಷ್ಠ ಮಂಡಳಿ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಾಗುತ್ತಾರೆ~ ಎಂದು ಅವರು ಹೇಳಿದರು.

ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ತಮ್ಮ ಪಕ್ಷವು 228 ಸ್ಥಾನಗಳಿಗೆ ಸ್ಪರ್ಧಿಸುವುದು ಎಂಬುದಾಗಿ ಶುಕ್ರವಾರ ಏಕಪಕ್ಷೀಯ ಘೋಷಣೆ ಮಾಡಿ ಕಾಂಗ್ರೆಸ್ಸನ್ನು ಅಚ್ಚರಿಯ ಕೂಪಕ್ಕೆ ತಳ್ಳಿದ್ದಾರೆ. ಸೀಟು ಹಂಚಿಕೆ ಬಗ್ಗೆ ಸಹಮತ ಸಾಧ್ಯವಾಗದೇ ಇರುವುದರಿಂದ ಈ ಬಗ್ಗೆ ನಿರ್ಧರಿಸಲು ಇನ್ನಷ್ಟು ಸಮಯ ಬೇಕು ಎಂಬುದಾಗಿ ಕಾಂಗ್ರೆಸ್ ಹೇಳುತ್ತಿದ್ದಾಗಲೇ ಬ್ಯಾನರ್ಜಿ ಈ ಅಚ್ಚರಿದಾಯಕ ಘೋಷಣೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT