ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮಘಟ್ಟ ಸೇವಾ ಸಂಸ್ಥೆಗಳ ಸಮ್ಮೇಳನ

Last Updated 9 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪಶ್ಚಿಮ ಘಟ್ಟ ಕಾರ್ಯಪಡೆ ಮತ್ತು ಅರಣ್ಯ ಇಲಾಖೆ ಜಂಟಿಯಾಗಿ ‘ಮಲೆನಾಡಿನ ಸುಸ್ಥಿರ ಅಭಿವೃದ್ಧಿಯ ಸಾಧ್ಯತೆಗಳು’ ಕುರಿತ ಪಶ್ಚಿಮಘಟ್ಟದ ಸ್ವಯಂ ಸೇವಾ ಸಂಸ್ಥೆಗಳ ಸಮ್ಮೇಳನವನ್ನು ಇದೇ 12ರಂದು ಸಾಗರದಲ್ಲಿ ಆಯೋಜಿಸಿವೆ.

ಈ ವಿಷಯವನ್ನು ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ಸಮ್ಮೇಳನವನ್ನು ಕಾನೂನು ಸಚಿವ ಎಸ್.ಸುರೇಶಕುಮಾರ್ ಉದ್ಘಾಟಿಸುವರು. ಪರಿಸರ ಸಚಿವ ಜೆ.ಕೃಷ್ಣ ಪಾಲೇಮಾರ್ ಸೇರಿದಂತೆ ಇತರರು ಈ ಸಮಾರಂಭದಲ್ಲಿ ಭಾಗವಹಿಸಿ, ಮಲೆನಾಡಿನಲ್ಲಿ ಯಾವ ರೀತಿಯ ಅಭಿವೃದ್ಧಿ  ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು ಎನ್ನುವದರ ಬಗ್ಗೆ ಚರ್ಚಿಸಲಿದ್ದಾರೆ ಎಂದರು.

ನದಿ ಮೂಲಗಳ ಸಂರಕ್ಷಣೆ ಸಲುವಾಗಿ 9 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದು, ಈ ಕುರಿತು ಯೋಜನಾ ವರದಿಯನ್ನು ನೀಡಲಾಗಿದೆ. ಈ ಸಲದ ಬಜೆಟ್‌ನಲ್ಲಿ ನದಿ ಕಣಿವೆಗಳ ರಕ್ಷಣೆಗೆ ಆದ್ಯತೆ ನೀಡಲು ಯೋಜನೆ ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಿದರು. ಶಿವನಸಮುದ್ರದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗುವುದು ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT