ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ ಅಣ್ವಸ್ತ್ರ ಕಾರ್ಯಕ್ರಮಕ್ಕೆ ಪಾಶಾ ?

Last Updated 26 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಪಿಟಿಐ): ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್‌ಐ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಅಹಮದ್ ಶೂಜಾ ಪಾಶಾ ಅವರನ್ನು ನಿವೃತ್ತಿಯ ನಂತರ ಪಾಕ್ ಅಣ್ವಸ್ತ್ರ ಕಾರ್ಯಕ್ರಮದ ಮುಖ್ಯಸ್ಥರಾಗಿ ನೇಮಿಸುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮಾರ್ಚ್ 18ರಂದು ಪಾಶಾ ಐಎಸ್‌ಐ ಮುಖ್ಯಸ್ಥರ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಮೆಮೊಗೇಟ್ ಹಗರಣದಲ್ಲಿ ಕಾಣಿಸಿಕೊಂಡಿದ್ದ ಅವರ ಸೇವೆಯನ್ನು ಮತ್ತೊಂದು ಅವಧಿಗೆ ವಿಸ್ತರಿಸದೇ ಇರಲು ಸರ್ಕಾರ ನಿರ್ಧರಿಸಿದೆ. ಪಾಶಾ 2010ರಲ್ಲೇ ನಿವೃತ್ತರಾಗಿದ್ದರೂ ಅವರ ಸೇವಾವಧಿ ವಿಸ್ತರಿಸಲಾಗಿತ್ತು.

ಪಾಶಾ ಅವರನ್ನು ಅಣ್ವಸ್ತ್ರ ಕಾರ್ಯಕ್ರಮದ ಮುಖ್ಯಸ್ಥರಾಗಿ ನೇಮಿಸುವುದು, ಭವಿಷ್ಯದಲ್ಲಿ ಪಾಕ್- ಅಮೆರಿಕ ಪರಮಾಣು ಒಪ್ಪಂದ ಮಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದು ಮೂಲಗಳು ತಿಳಿಸಿದ್ದಾಗಿ ವರದಿಯಲ್ಲಿ ಹೇಳಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT