ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್; ಬಲೂಚಿಸ್ತಾನ್ ನಲ್ಲಿ ಮತ್ತೆ ಭೂಕಂಪ

Last Updated 28 ಸೆಪ್ಟೆಂಬರ್ 2013, 10:40 IST
ಅಕ್ಷರ ಗಾತ್ರ

ಕರಾಚಿ (ಪಿಟಿಐ): ಪಾಕಿಸ್ತಾನದ ನೈರುತ್ಯ ಭಾಗದಲ್ಲಿರುವ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಮತ್ತೆ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಬಲೂಚಿಸ್ತಾನ್ ಸರ್ಕಾರದ ವಕ್ತಾರರು ಶನಿವಾರ ತಿಳಿಸಿದ್ದಾರೆ. ಕಳೆದ ಮೂರು ದಿನಗಳ ಹಿಂದಷ್ಟೇ ಸಂಭವಿಸಿದ ಭೂಕಂಪನದಲ್ಲಿ 500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

ಬಲೂಚಿಸ್ತಾನದ ಆರೂ ಜಿಲ್ಲೆಗಳಲ್ಲಿ ಭೂಮಿ ಕಂಪಸಿದ್ದು, ಕುಜ್ದಾರ್ ಜಿಲ್ಲೆಯ ಮೇಲೆ ಭೂಕಂಪನದ ಪ್ರಭಾವ ತೀಕ್ಷ್ಣವಾಗಿದೆ ಎಂದು ಪಾಕಿಸ್ತಾನದ ಭೂವಿಜ್ಞಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ತಕ್ಷಣಕ್ಕೆ ಸಾವು ನೋವಿನ ಬಗ್ಗೆ ಯಾವುದೆ ವರದಿಗಳು ಬಂದಿಲ್ಲ ಎಂದು ಅವರು ತಿಳಿಸಿದ್ದಾರೆ. 

 ಸ್ಥಳೀಯ ಕಾಲಮಾನ  ಮಧ್ಯಾಹ್ನ 1 ಗಂಟೆಗೆ  ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.2 ರಷ್ಟು ತೀವ್ರತೆಯ ಕಂಪನ ದಾಖಲಾಗಿದೆ. ಭಾರೀ ಪ್ರಮಾಣದ ಸಾವು ನೋವು ಸಂಭವಿಸಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿವೆ.

ಬಲೂಚಿಸ್ತಾನ್ ಸರ್ಕಾರವು ಭೂಕಂಪ ಪೀಡಿತ ಜಿಲ್ಲೆಗಳಲ್ಲಿ ತುರ್ತುಪರಿಸ್ಥಿತಿ ಘೋಷಿಸಿದೆ. ಸೇನಾ ಸಿಬ್ಬಂದಿ ಮತ್ತು ಇತರೆ ರಕ್ಷಣಾ ಪಡೆಗಳ ನೆರವಿನಿಂದ ರಕ್ಷಣಾ ಕಾರ್ಯ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT