ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್ ವಿರುದ್ಧ ಭಾರತಕ್ಕೆ 5 ವಿಕೆಟ್ ಸೋಲು

Last Updated 25 ಡಿಸೆಂಬರ್ 2012, 17:09 IST
ಅಕ್ಷರ ಗಾತ್ರ

ಬೆಂಗಳೂರು : ಭಾರತ ಹಾಗೂ ಪಾಕಿಸ್ತಾನ ನಡುವೆ ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ನಡೆದ ಟ್ಟೆಂಟಿ-20 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳಿಂದ ಸೋಲು ಕಂಡಿತು.

ಪಾಕ್ ನಾಯಕ ಮೊಹಮ್ಮದ್ ಹಫೀಜ್ ಅವರು ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಪರಿಣಾಮ ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು ಬರೇ 133 ರನ್‌ಗಳನ್ನಷ್ಟೆ ಗಳಿಸಿತು. ಭಾರತದ ಪರ ಗೌತಮ್ ಗಂಭೀರ್ 43 ಹಾಗೂ ಅಜಿಂಕಾ ರೆಹಾನೆ 42 ರನ್ ಗಳಿಸಿದ್ದು ಬಿಟ್ಟರೆ ಉಳಿದ್ಯಾವ ಬ್ಯಾಟ್ಸಮನ್‌ಗಳು ಕನಿಷ್ಠ 10 ರನ್ ಗಳಿಸಲಾಗಲಿಲ್ಲ.

ಇದಕ್ಕೆ ಉತ್ತರವಾಗಿ ಪಾಕ್ ತಂಡ ಇನ್ನೂ2 ಎಸೆತಗಳು ಬಾಕಿ ಇರುವಂತೆಯೇ 5 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಮುಟ್ಟಿತು. ಪಾಕ್ ಪರ ನಾಯಕ ಮೊಹಮ್ಮದ್ ಹಫೀಜ್ ಅವರು 61 ರನ್ ಗಳಿಸಿದರೆ ಶೊಹೆಬ್ ಮಲಿಕ್ 57 ರನ್ ಗಳಿಸಿ ಪಾಕ್ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದರು.
ಎರಡು ಪಂದ್ಯಗಳ ಟ್ವೆಂಟಿ-20 ಸರಣಿಯಲ್ಲಿ ಪಾಕ್ ಇದೀಗ 1-0 ಇಂದ ಮುಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT