ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್:ಚೀನಿ ಭಾಷೆ ಗೊಂದಲ

Last Updated 8 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಐಎಎನ್‌ಎಸ್): ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಶಾಲೆಗಳಲ್ಲಿ ಚೀನಿ ಭಾಷೆ ಕಲಿಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಈ ಆದೇಶ ಇಲ್ಲಿನ ಶಾಲೆಗಳಲ್ಲಿ ಗೊಂದಲ ಸೃಷ್ಟಿಸಿದೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

`ಇತರೆ ಭಾಷೆಗಳಿಗೆ ಹೋಲಿಸಿದರೆ ಚೀನಿ ಭಾಷೆ ಕಲಿಯುವುದು ಕಠಿಣ~ ಎಂದು ಪತ್ರಿಕೆಯ ಸಂಪಾದಕೀಯದಲ್ಲಿ ಬರೆಯಲಾಗಿದೆ.  ಚೀನಿ ಭಾಷೆ ಮನೆಯಲ್ಲಿ ಕಲಿತುಕೊಂಡರೆ ಸ್ಪಷ್ಟವಾಗಿ ಉಚ್ಛಾರಣೆ ಮಾಡಲು ಸಾಧ್ಯವಾಗುವುದಿಲ್ಲ. ಇದನ್ನು ಕಲಿಯಬೇಕಾದರೆ ಕನಿಷ್ಠ18 ತಿಂಗಳ ಕಠಿಣ ಪರಿಶ್ರಮ ಅಗತ್ಯ ಎಂದು ಅದು ಉಲ್ಲೇಖಿಸಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT