ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌: ವಿವಾದಿತ ನ್ಯಾ. ಚೌಧರಿ ನಿವೃತ್ತಿ

Last Updated 11 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌ (ಪಿಟಿಐ): ಪಾಕಿಸ್ತಾನದ ನ್ಯಾಯಾಂಗ ಇತಿಹಾಸದಲ್ಲಿಯೇ  ಅತ್ಯಂತ ಹೆಚ್ಚು ಕಾಲ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆಯ ಜೊತೆಗೆ  ಅತಿ ಹೆಚ್ಚು ವಿವಾದಕ್ಕೂ ಒಳಗಾಗಿದ್ದ  ಇಫ್ತಿಕಾರ್‌ ಚೌಧರಿ ಬುಧವಾರ ಸೇವೆಯಿಂದ  ನಿವೃತ್ತರಾದರು.

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾಗಿ ಆರು ವರ್ಷ ಸೇವೆ ಸಲ್ಲಿಸಿದ 65 ವರ್ಷದ ಚೌಧರಿ ಅವರಿಗೆ ವಕೀಲರು ಹೃದಯಸ್ಪರ್ಶಿ ಬೀಳ್ಕೊಡುಗೆ ನಿಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಚೌಧರಿ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ ನಡೆಯದ ಹೊರತು ಪ್ರಜಾಪ್ರಭುತ್ವ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದರು.

ಪಾಕಿಸ್ತಾನದ ಅಧ್ಯಕ್ಷ ಆಸಿಫ್‌ ಅಲಿ ಜರ್ದಾರಿ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳ ಮರು ತನಿಖೆ, ಸುಪ್ರೀಂಕೋರ್ಟ್‌ ಆದೇಶ ಪಾಲಿಸಲು ನಿರಾಕರಿಸಿದ ಪ್ರಧಾನಿ ಯಸೂಫ್‌ ರಜಾ ಗಿಲಾನಿ ರಾಜೀನಾಮೆ ನೀಡಿದ ಐತಿ­ಹಾ­ಸಿಕ ಘಟನೆ ನಡೆದದ್ದೂ ಚೌಧರಿ ಮುಖ್ಯ ನ್ಯಾಯಮೂರ್ತಿಗಳಾಗಿ­ದ್ದಾಗಲೇ.

ಪಾಕಿಸ್ತಾನ ಸರ್ಕಾರ ಮತ್ತು ಸೇನೆಯ ಜೊತೆ ಸಂಘರ್ಷಕ್ಕೆ ಇಳಿದಿದ್ದ ಚೌಧರಿ ನ್ಯಾಯಾಂಗಕ್ಕೊಂದು ಘನತೆ, ಗೌರವ ತಂದುಕೊಟ್ಟಿದ್ದರು. ಭ್ರಷ್ಟ ರಾಜಕಾರಣಿಗಳು ಮತ್ತು ಹಿರಿಯ ಅಧಿಕಾರಿಗಳಿಗೆ ನಡುಕ ಹುಟ್ಟಿಸಿದ್ದರು.

2005ರಲ್ಲಿ ಅವರು ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ನವೆಂಬರ್ 2007ರಿಂದ ಮಾರ್ಚ್‌ 2009ರವರೆಗೂ ಎರಡು ವರ್ಷ ಮುಷರಫ್‌ ಆಡಳಿತಾವಧಿಯಲ್ಲಿ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT