ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ನಲ್ಲಿ ಬಸ್ ಸ್ಫೋಟ: 18 ಸಾವು

Last Updated 17 ಜನವರಿ 2011, 19:30 IST
ಅಕ್ಷರ ಗಾತ್ರ

ಪೆಶಾವರ (ಪಿಟಿಐ): ಪಾಕಿಸ್ತಾನದ ವಾಯವ್ಯ ಭಾಗದ ಖೈಬರ್- ಪಖ್ತುನ್‌ಖ್ವಾ ಪ್ರಾಂತ್ಯದ ಪ್ರಮುಖ ಪಟ್ಟಣವಾದ  ಹಂಗು ಸಮೀಪದ ಅಲಿಜೈ ಜೊಜಾರ ಎಂಬಲ್ಲಿ ಸೋಮವಾರ ಮಿನಿ ಬಸ್ಸೊಂದರಲ್ಲಿ ಶಕ್ತಿಶಾಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ  18 ಮಂದಿ ಸತ್ತು ಇತರ ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

ಗ್ಯಾಸ್ ಸಿಲಿಂಡರ್ ಸ್ಫೋಟಿಸಿ ಈ ದುರಂತ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ಅಬ್ದುರ್ ರಶೀದ್ ತಿಳಿಸಿದ್ದರೂ, ಇದೊಂದು ಭಯೋತ್ಪಾದಕ ಕೃತ್ಯವಾಗಿರುವ ಸಾಧ್ಯತೆಯನ್ನೂ ಅವರು ತಳ್ಳಿಹಾಕಿಲ್ಲ. ಬಾಂಬರ್ ಬಸ್ಸಿನೊಳಗೆ ಇದ್ದಿರುವ ಸಾಧ್ಯತೆ ಇದೆ ಎಂದು ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT