ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ನಿಂದ ಹತ್ಫ್-9 ಕ್ಷಿಪಣಿ ಪರೀಕ್ಷೆ

Last Updated 29 ಮೇ 2012, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಪಿಟಿಐ): ಶತ್ರುಪಡೆಯ ದಾಳಿಗೆ ಅತ್ಯಂತ ಕ್ಷಿಪ್ರವಾಗಿ ಪ್ರತಿಕ್ರಿಯಿಸುವ ಅಣ್ವಸ್ತ್ರ ಸಿಡಿತಲೆ ಹೊತ್ತೊಯ್ಯಬಲ್ಲ ಹತ್ಫ್-9 ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಪಾಕಿಸ್ತಾನ ಮಂಗಳವಾರ ಯಶಸ್ವಿಯಾಗಿ ನಡೆಸಿತು.

ಸಂಪೂರ್ಣ ಸ್ವದೇಶಿ ನಿರ್ಮಿತವಾದ ನೆಲದಿಂದ ನೆಲಕ್ಕೆ ಚಿಮ್ಮುವ 60 ಕಿ.ಮೀ. ದಾಳಿ ವ್ಯಾಪ್ತಿಯ ಹತ್ಫ್-9 ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ ಎಂದು ಪಾಕಿಸ್ತಾನದ ಸೇನೆ ಹೇಳಿಕೊಂಡಿದೆ. ಆದರೆ ಪರೀಕ್ಷಾರ್ಥ ಪ್ರಯೋಗ ನಡೆಸಿದ ಸ್ಥಳ ಯಾವುದೆಂಬುದನ್ನು ಬಹಿರಂಗಗೊಳಿಸಿಲ್ಲ.

ಈ ಕ್ಷಿಪಣಿಯು ಗುರಿಯ ಮೇಲೆ ದಾಳಿ ನಡೆಸಿದ ತಕ್ಷಣವೇ ಸ್ವಯಂಚಾಲಿತವಾಗಿ ತನ್ನ ಜಾಗದಿಂದ ಸ್ಥಾನಾಂತರವಾಗಲಿದೆ. ಹೀಗಾಗಿ ಶತ್ರುಪಡೆಗೆ ಇದರ ಮೇಲೆ ಗುರಿ ಇಟ್ಟು ಗುಂಡಿನ ದಾಳಿ ನಡೆಸುವುದು ಕಷ್ಟವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT