ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಲಕರಿಂದ ಶಾಲೆಗೆ ಮುತ್ತಿಗೆ

Last Updated 22 ಫೆಬ್ರುವರಿ 2011, 8:20 IST
ಅಕ್ಷರ ಗಾತ್ರ

ಕುರುಗೋಡು: ಬೈಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಗ್ರಾಮದ ಸ್ವಾಮಿ ವಿವೇಕಾನಂದ ಯುವಕ ಸಂಘದ ಸದಸ್ಯರು ಒತ್ತಾಯಿಸಿದರು.

ಸಂಘದ ಅಧ್ಯಕ್ಷ ಎಚ್. ಮಲ್ಲಿಕಾರ್ಜುನ, ಕಾರ್ಯದರ್ಶಿ ಮಲ್ಲಯ್ಯ ಮತ್ತು ಉಪ ಕಾರ್ಯದರ್ಶಿ ಹನುಮಂತಪ್ಪ ನೇತೃತ್ವದಲ್ಲಿ ವಿದ್ಯಾರ್ಥಿ ಪಾಲಕ ಪೋಷಕರು ಸೋಮವಾರ ಶಾಲೆಗೆ ಮುತ್ತಿಗೆ ಹಾಕಿ ಮಧ್ಯಾಹ್ನದ ಬಿಸಿಊಟದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಬಯಲಿಗೆಳೆದು ತಪ್ಪಿತಸ್ತರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವಿದ್ಯಾರ್ಥಿ ವೇತನ ಮತ್ತು ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ಉಚಿತ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಮತ್ತು ಅವ್ಯವಹಾರ ತಪ್ಪಿಸಲು ಇಸ್ಕಾನ್‌ನಿಂದ ವಿತರಿಸುವ ಅಕ್ಷಯ ಪಾತ್ರೆ ಯೋಜನೆ ಮೂಲಕ ಮಧ್ಯಾಹ್ನದ ಬಿಸಿಯೂಟ ಪೂರೈಸಬೇಕು ಎಂದು ಆಗ್ರಹಿಸಿದರು.

ಈ ಬಗ್ಗೆ ಹಲವು ಬಾರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದರೂ ಅವರು ಈವರೆಗೆ ಕ್ರಮಕೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ನಡೆಸಬೇಕಾಗುವುದು ಎಂದು  ಎಚ್ಚರಿಸಿದರು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಜಿಲ್ಲಾ ಪಂಚಾಯ್ತಿ ಸದಸ್ಯೆ ಮಮತಾ ಮಹೇಶರೆಡ್ಡಿ,  ಶಾಲೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ಇಲಾಖೆ ಮೇಲಾಧಿಕಾರಿಗಳಿಂದ ತನಿಖೆ ನಡೆಸಿ ತಪ್ಪಿತಸ್ತರ ವಿರುದ್ಧ ಸೂಕ್ತಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಪರಿಸ್ಥಿತಿ ತಿಳಿಗೊಂಡಿತು.

ನಂತರ ಸಭೆ ನಡೆಸಿದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ,   ಪ್ರಸ್ತುತ ಪ್ರಬಾರ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸುತ್ತಿದ್ದ ಕಾಳಪ್ಪ ಅವರನ್ನು ಕೈಬಿಟ್ಟು ಶಾಲೆಯ ಮತ್ತೊಬ್ಬ ಹಿರಿಯ ಶಿಕ್ಷಕರಿಗೆ ಉಸ್ತುವಾರಿ ವಹಿಸುವ ನಿರ್ಣಯ ಕೈಗೊಂಡು ಸಮಸ್ಯೆಗೆ ತಾತ್ಕಾಲಿಕ ಪರಿಹಾರ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT