ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಲಿಟೆಕ್ನಿಕ್‌ ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌ ತರಬೇತಿ

Last Updated 9 ಜನವರಿ 2014, 19:30 IST
ಅಕ್ಷರ ಗಾತ್ರ

ರ್ಕಾರಿ ಪಾಲಿಟೆಕ್ನಿಕ್‌ ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌ ಬಿಡಿಭಾಗಗಳನ್ನು ಜೋಡಿಸುವುದು ಹಾಗೂ ಆಪರೇಟಿಂಗ್‌ ಸಿಸ್ಟಂ ದೋಷವನ್ನು ಸರಿಪಡಿಸುವ ಎರಡು ದಿನಗಳ ಉಚಿತ ಕಾರ್ಯಾಗಾರವನ್ನು ಎಂವಿಜೆ ಎಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳು ಆಯೋಜಿಸಿದ್ದರು.

ಕಾಲೇಜಿನ ಎಂಸಿಎ ವಿಭಾಗದ ವಿದ್ಯಾರ್ಥಿಗಳು ನಡೆಸಿಕೊಟ್ಟ ಈ ಉಚಿತ ಕಾರ್ಯಾಗಾರದಲ್ಲಿ 45 ವಿದ್ಯಾರ್ಥಿಗಳು ಪಾಲ್ಗೊಂಡು ಶಿಬಿರದ ಪ್ರಯೋಜನ ಪಡೆದರು. ಕಂಪೆನಿ ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ಎಂವಿಜೆಸಿಇ ನಡೆಸಿಕೊಟ್ಟ ಈ ಕಾರ್ಯಾಗಾರದಲ್ಲಿ ಪ್ರಯೋಗ ಮಾದರಿಯಲ್ಲಿ ತರಬೇತಿ ನೀಡಲಾಯಿತು.

ಎರಡು ದಿನಗಳ ತರಬೇತಿ ಕಾರ್ಯಾಗಾರದ ನಂತರ ವಿದ್ಯಾರ್ಥಿಗಳಿಗೆ ಕಲಿತ ವಿಷಯಗಳ ಕುರಿತು ಕಿರು ಪರೀಕ್ಷೆ ನಡೆಸಲಾಯಿತು. ಇದರಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಬದರಿನಾರಾಯಣ್‌ಹಾಗೂ ಕಾಲೇಜಿನ ಉಪನ್ಯಾಸಕರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT