ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಶ್ಚಿಮಾತ್ಯ ಪೌರಾತ್ಯ ಸಂಸ್ಕೃತಿ ಸಮ್ಮಿಲನ

Last Updated 12 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಹಿಂದೂ ಧರ್ಮದಲ್ಲಿದ್ದ ಉತ್ತಮ ವಿಚಾರಗಳನ್ನು ಜಗತ್ತಿನಾದ್ಯಂತ ಪರಿಣಾಮಕಾರಿಯಾಗಿ ಪ್ರಚುರ ಪಡಿಸಿದವರು ಸ್ವಾಮಿ ವಿವೇಕಾನಂದರು. ಇವರ ಆದರ್ಶವನ್ನು ಪ್ರತಿಯೊಬ್ಬಯುವಕರು ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಸಚಿವ ಆರ್. ಅಶೋಕ ಹೇಳಿದರು.

ಬಿಜೆಪಿ ಯುವ ಮೋರ್ಚಾ ನಗರದಲ್ಲಿ ಗುರುವಾರ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ 150ನೇ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

 ಮೋರ್ಚಾದ ರಾಜ್ಯ ಕಾರ್ಯದರ್ಶಿ ಎಚ್.ಎಸ್. ಗೋಪಿನಾಥ್ `ವಿವೇಕಾನಂದರು ಪೌರಾತ್ಯ ಮತ್ತು ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಒಟ್ಟುಗೂಡಿಸಿದರು~ ಎಂದರು.  ಮೋರ್ಚಾದ ನಗರದ ಅಧ್ಯಕ್ಷ ಸುಬ್ಬನರಸಿಂಹ, ಪಾಲಿಕೆ ಸದಸ್ಯರಾದ ಎ.ಎಚ್. ಬಸವರಾಜ್, ಎನ್.ಆರ್. ರಮೇಶ್, ಎಚ್.ಸುರೆಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT