ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಚ್‌.ಡಿ ಪ್ರವೇಶ ಪರೀಕ್ಷೆ ಮುಂದಕ್ಕೆ

ಮೈಸೂರು ವಿಶ್ವವಿದ್ಯಾಲಯದಲ್ಲಿ ಪರೀಕ್ಷಾರ್ಥಿಗಳ ಪ್ರತಿಭಟನೆ
Last Updated 15 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಮೈಸೂರು: ಪ್ರಶ್ನೆಪತ್ರಿಕೆಯಲ್ಲಿ ಕನ್ನಡ ಅವತರಣಿಕೆ ಮುದ್ರಿಸಿಲ್ಲ ಎಂದು ಕೆಲವು ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ 10 ವಿಷಯಗಳ ಪಿಎಚ್‌.ಡಿ ಪ್ರವೇಶ ಪರೀಕ್ಷೆ ಯನ್ನು ಮೈಸೂರು ವಿಶ್ವವಿದ್ಯಾಲಯ ಮುಂದೂಡಿದೆ.

ಮೈಸೂರು ವಿಶ್ವವಿದ್ಯಾನಿಲಯವು ಭಾನುವಾರ 73 ವಿಷಯಗಳಿಗೆ ಪಿಎಚ್‌.ಡಿ ಪ್ರವೇಶ ಪರೀಕ್ಷೆ ನಿಗದಿಪಡಿ ಸಿತ್ತು. ಬೆಳಿಗ್ಗೆ 9.30ರಿಂದ 12.30 ರವರೆಗೆ ನಿಗದಿಯಾಗಿದ್ದ 40 ವಿಷಯ ಗಳಲ್ಲಿ ಸಮಾಜಶಾಸ್ತ್ರ, ಶಿಕ್ಷಣ ಇತ್ಯಾದಿ ಪ್ರಶ್ನೆಪತ್ರಿಕೆಗಳಲ್ಲಿ ಕನ್ನಡ ಅವತರಣಿಕೆ ಇರಲಿಲ್ಲ. ಇದನ್ನು ಪ್ರಶ್ನಿಸಿ ಕೆಲ ಪರೀಕ್ಷಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಮಹಾರಾಣಿ ವಿಜ್ಞಾನ ಕಾಲೇಜಿನ ಪರೀಕ್ಷಾ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಿದರು.

ಪಿಎಚ್‌.ಡಿ ಪ್ರವೇಶ ಪರೀಕ್ಷೆಗೆ ಪರಿಶಿಷ್ಟ ಜಾತಿ/ಪಂಗಡದವರಿಗೆ ಒಂದು ಸಾವಿರ ರೂಪಾಯಿ ಮತ್ತು ಇತರರಿಗೆ ಎರಡು ಸಾವಿರ ರೂಪಾಯಿ ಶುಲ್ಕ ಸಂಗ್ರಹಿಸಲಾಗಿದೆ. ಆದರೆ, ಕೆಲ ಪ್ರಶ್ನೆ ಪತ್ರಿಕೆಗಳಲ್ಲಿ ಪ್ರಶ್ನೆಗಳ ಕನ್ನಡ ಅವರಣಿಕೆ ಇಲ್ಲ. ಉತ್ತರ ಬರೆಯಲು ಪದವಿ ಪರೀಕ್ಷೆಗೆ ನೀಡುವ ಉತ್ತರ ಪತ್ರಿಕೆಗಳನ್ನು ನೀಡಲಾಗಿದೆ. ವಸ್ತುನಿಷ್ಠ ಮಾದರಿ ಪ್ರತಿಕೆಗೆ ಆಪ್ಟಿಕಲ್‌ ಮಾರ್ಕಿಂಗ್‌ ರೀಡರ್‌ (ಒಎಂಆರ್‌) ಉತ್ತರ ಪತ್ರಿಕೆ ಒದಗಿಸಿಲ್ಲ. ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಇಲ್ಲ ಎಂದು ಪ್ರತಿಭಟನಾನಿರತರು ಆರೋಪಿಸಿದರು.

ಸ್ಥಳಕ್ಕೆ ಬಂದ ಕುಲಪತಿ ಪ್ರೊ.ಕೆ.ಎಸ್‌. ರಂಗಪ್ಪ, ಕುಲಸಚಿವ ಪ್ರೊ.ಸಿ. ಬಸವರಾಜು ಪ್ರತಿಭಟನಕಾರರರೊಂ ದಿಗೆ ಮಾತನಾಡಿ, ಮರುಪರೀಕ್ಷೆ ನಡೆಸಿ ವಿದ್ಯಾರ್ಥಿಗಳ ಹಿತ ಕಾಯಲು ವಿಶ್ವವಿದ್ಯಾಲಯ ಬದ್ಧವಾಗಿದೆ ಎಂದು ಭರವಸೆ ನೀಡಿದರು.

ಮೂರು ವರ್ಷಗಳ ಹಿಂದೆಯೂ ಪ್ರವೇಶ ಪರೀಕ್ಷೆ ನಡೆಸಿದಾಗ ಪ್ರಶ್ನೆಪತ್ರಿಕೆ ಯಲ್ಲಿ ಕನ್ನಡ ಅವತರಣಿಕೆ ಇರಲಿಲ್ಲ, ಆಗಲೂ ಮರುಪರೀಕ್ಷೆ ನಡೆಸಲಾಗಿತ್ತು. ಈ ಬಾರಿ ಪರೀಕ್ಷೆಯಲ್ಲೂ ಅದೇ ಮುಂದುವರಿದಿದೆ, ಇದರಿಂದಾಗಿ ಪರೀಕ್ಷೆ ಬರೆಯಲು ರಾಜ್ಯದ ವಿವಿಧೆಡೆಗಳಿಂದ ಬಂದಿದ್ದ ಅಭ್ಯರ್ಥಿಗಳಿಗೆ ಭ್ರಮನಿರಸನವಾಗಿದೆ ಎಂದು ಸಮಾಜಶಾಸ್ತ್ರ ಪರೀಕ್ಷಾರ್ಥಿ ಪಿ. ಶಿವಕುಮಾರ ಅಳಲು ತೋಡಿಕೊಂಡರು.

ರಾಜ್ಯದ 30 ಜಿಲ್ಲೆಗಳಿಂದ ಪರೀಕ್ಷೆಗೆ ಬಂದಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿದ್ದರಿಂದ ಬೇಸರ ಗೊಂಡು ಮೈಸೂರು ವಿಶ್ವವಿದ್ಯಾಲಯದ ಪರೀಕ್ಷಾ ಅವ್ಯವಸ್ಥೆಗಳ ಬಗ್ಗೆ ಶಪಿಸಿದರು. ಮೂರು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ ಬಂದಿದ್ದರು.

ಮಧ್ಯಾಹ್ನ 2.30ರಿಂದ 5.30ರವರೆಗೆ ಕೆಲ ವಿಷಯಗಳ ಪರೀಕ್ಷೆಗಳು ನಡೆದವು. ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜು, ಕಲಾ– ವಾಣಿಜ್ಯ ಕಾಲೇಜು, ಮಹಾರಾಜ ಪದವಿಪೂರ್ವ ಕಾಲೇಜಿನಲ್ಲಿ ಪರೀಕ್ಷೆಗಳು ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT