ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಫ್: ಶೇ 8.5 ಬಡ್ಡಿ

Last Updated 8 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭವಿಷ್ಯ ನಿಧಿ (ಪಿಎಫ್) ಠೇವಣಿಗೆ ಪ್ರಸಕ್ತ ಸಾಲಿನಲ್ಲಿ (2013-14) ಶೇ 8.5ರಷ್ಟು ಬಡ್ಡಿ ದರ ನಿಗದಿಯಾಗುವ ಸಾಧ್ಯತೆ ಇದೆ. ನೌಕರರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್‌ಒ) ಶೀಘ್ರದಲ್ಲೇ ಇದಕ್ಕೆ ಒಪ್ಪಿಗೆ ನೀಡಲಿದ್ದು, ಅಧಿಕೃತ ಪ್ರಕಟಣೆ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ಸಾಲಿನಲ್ಲೂ (2012-13) `ಪಿಎಫ್' ಠೇವಣಿಗೆ ಶೇ 8.5ರಷ್ಟು  ಬಡ್ಡಿ ದರ ನೀಡಲಾಗಿತ್ತು. ಪ್ರಸಕ್ತ ವರ್ಷ ಭವಿಷ್ಯ ನಿಧಿ ಠೇವಣಿಗೆ ಶೇ 8.75ರಷ್ಟು ಬಡ್ಡಿ ದರ ನಿಗದಿಪಡಿಸಬೇಕು ಎಂಬ ಪ್ರಸ್ತಾವ ಸಲ್ಲಿಸಲಾಗಿತ್ತು. ಆದರೆ, ಹಣಕಾಸು ಸಚಿವಾಲಯ ಇದನ್ನು ಒಪ್ಪಿಲ್ಲ  ಎಂದು ಮೂಲಗಳು ಹೇಳಿವೆ.

ಸೆ.23ರಂದು `ಇಪಿಎಫ್‌ಒ' ಸಭೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT