ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ಶುಲ್ಕ ಹೆಚ್ಚಳ: ಆಕ್ರೋಶ

Last Updated 7 ಜನವರಿ 2014, 6:49 IST
ಅಕ್ಷರ ಗಾತ್ರ

ಯಾದಗಿರಿ: ಶೈಕ್ಷಣಿಕ ವರ್ಷ ಮುಗಿಯುತ್ತಿರುವ ಹಂತದಲ್ಲಿ ಸರ್ಕಾರ ಮತ್ತು ಪದವಿಪೂರ್ವ ಶಿಕ್ಷಣ ಮಂಡಳಿಗಳು ದಿಢೀರನೆ ಶುಲ್ಕವನ್ನು ಪ್ರಸಕ್ತ ಸಾಲಿನಲ್ಲೇ ಅನ್ವಯಿಸುವಂತೆ ಏರಿಸಿದ್ದು, ರಾಜ್ಯದ ಲಕ್ಷಾಂತರ ಪಿಯು ವಿದ್ಯಾರ್ಥಿಗಳಿಗೆ ಆಘಾತ ನೀಡಲು ಮುಂದಾಗಿವೆ ಎಂದು ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಸ್ಟೂಡೆಂಟ್ಸ್‌ ಆರ್ಗನೈ­ಸೇಷನ್ ಆಕ್ರೋಶ ವ್ಯಕ್ತಪಡಿಸಿದೆ.

ಪದವಿ ಪೂರ್ವ ಕಾಲೇಜುಗಳಲ್ಲಿ ಬೋಧನಾ ಶುಲ್ಕ, ಪ್ರವೇಶ, ಪ್ರಯೋಗಾಲಯ ಮತ್ತು ಪರೀಕ್ಷಾ ಶುಲ್ಕವನ್ನು ಶೇ 20ರಿಂದ ಶೇ 33ರ ವರೆಗೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಏರಿಸಲು ಸರ್ಕಾರ ಆದೇಶಿಸಿದೆ. ಇದರಿಂದಾಗಿ ವಿವಿಧ ಕೋರ್ಸ್‌ಗಳ ಪಿಯು ವಿದ್ಯಾರ್ಥಿಗಳು ₨200ರಿಂದ ₨530ರ ವರೆಗೆ ಹೆಚ್ಚುವರಿ ಶುಲ್ಕವನ್ನು ಭರಿಸಬೇಕಾಗಿದೆ ಎಂದು ಹೇಳಿದೆ.

ಅಕ್ಟೋಬರ್‌ನಲ್ಲಿ ಹೊರಡಿಸಿರುವ ಈ ಆದೇಶ, ಇನ್ನೂ ಹಲವಾರು ಕಾಲೇಜುಗಳ ಪ್ರಾಂಶುಪಾಲರಿಗೆ ತಲುಪಿಲ್ಲ. ಈಗಾಗಲೇ ಶಿಕ್ಷಣವು ವ್ಯಾಪಾರೀಕರಣಗೊಂಡಿದ್ದು, ಪೋಷಕ­ರಿಗೆ ದೊಡ್ಡ ಹೊರೆಯಾಗಿದೆ. ಈ ಶುಲ್ಕ ಏರಿಕೆಯು, ಬೆಲೆ ಏರಿಕೆಯ ಬೇಗೆಯಲ್ಲಿ ಬೇಯುತ್ತಿರುವವರಿಗೆ ಮತ್ತೊಂದು ಬರೆ ಎಳೆದಂತಾಗುತ್ತದೆ. ಈ ಕೂಡಲೇ ಈ ಆದೇಶವನ್ನು ಸರ್ಕಾರ ಹಿಂಪಡೆಯ­ಬೇಕು ಎಂದು ಆಗ್ರಹಿಸಿದೆ.

ಬೇಡಿಕೆಯ ಈಡೇರಿಕೆಗಾಗಿ ರಾಜ್ಯದ ಪಿಯು ವಿದ್ಯಾರ್ಥಿಗಳು ಹೋರಾಡಲು ಸಜ್ಜಾಗಬೇಕು ಎಂದು ಎಐಡಿಎಸ್ಒ ಜಿಲ್ಲಾ ಸಮಿತಿ ಅಧ್ಯಕ್ಷೆ ಗೌರಮ್ಮ ಸಿ.ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT