ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ರಾಜ್ಯಪಾಲರ ಸಲಹೆ

Last Updated 1 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು:   `ತಮಿಳುನಾಡಿಗೆ ಪ್ರತಿದಿನ 9 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಬೇಕು ಎಂಬ ಸುಪ್ರೀಂಕೋರ್ಟ್ ಆದೇಶದ ಬಗ್ಗೆ ರಾಜ್ಯ ಸರ್ಕಾರ ಪುನರ್‌ಪರಿಶೀಲನಾ ಅರ್ಜಿ ಸಲ್ಲಿಸಬೇಕು~ ಎಂದು ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಸಲಹೆ ನೀಡಿದರು.

ನಗರದಲ್ಲಿ ಸೋಮವಾರ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, `ಕೋರ್ಟ್ ಸೂಚನೆ ಪಾಲಿಸುವುದು ಅನಿವಾರ್ಯ. ಆದರೆ, ಅರ್ಜಿಯಲ್ಲಿ ರಾಜ್ಯದ ವಾಸ್ತವಿಕ ಸ್ಥಿತಿಯನ್ನು ತಿಳಿಸಿ ಮನವರಿಕೆ ಮಾಡಿಕೊಡಬೇಕು~ ಎಂದರು. ಮತ್ತೊಂದು ಸಮಾರಂಭದಲ್ಲಿ ಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, `ತಮಿಳುನಾಡಿಗೆ ಪ್ರತಿನಿತ್ಯ 9 ಸಾವಿರ ಕ್ಯೂಸೆಕ್ ನೀರು ಬಿಡಬೇಕು ಎಂಬ ಸುಪ್ರೀಂಕೋರ್ಟ್ ಆದೇಶದಿಂದ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸ್ಥಿತಿ ನಿರ್ಮಾಣವಾಗಿದೆ. ಕೇಂದ್ರದ ಪ್ರಭಾವಿ ಸಚಿವರಾಗಿರುವ ಎಂ.ವೀರಪ್ಪ ಮೊಯಿಲಿ ಅವರು ರಾಜ್ಯದ ಸ್ಥಿತಿಯನ್ನು ಪ್ರಧಾನಮಂತ್ರಿ ಅವರಿಗೆ ಮನವರಿಕೆ ಮಾಡಿಕೊಟ್ಟು ಈ ಸಮಸ್ಯೆಯನ್ನು ಬಗೆಹರಿಸಬೇಕು~ ಎಂದು ವಿನಂತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT