ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುರಸಭೆ ಕಚೇರಿ ಎದುರು ದಿನಗೂಲಿ ನೌಕರರ ಪ್ರತಿಭಟನೆ

Last Updated 21 ಜನವರಿ 2011, 8:15 IST
ಅಕ್ಷರ ಗಾತ್ರ

ಮಳವಳ್ಳಿ: ಪುರಸಭೆ ದಿನಗೂಲಿ ನೌಕರರೊಬ್ಬರನ್ನು ಪುರಸಭೆ ಸದಸ್ಯರೊಬ್ಬರು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಗುರುವಾರ ಕೆಲವು ದಿನಗೂಲಿ ನೌಕರರು ಪುರಸಭೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸೂಕ್ತ ಭದ್ರತೆಗೆ ಒತ್ತಾಯಿಸಿದರು.

ಪುರಸಭೆ ಸದಸ್ಯ ರಾಜಶೇಖರ್ ದಿನಗೂಲಿ ನೌಕರ ಸುರೇಶ್ ಎಂಬವರನ್ನು ಕುಡಿಯುವ ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಹಾಗೂ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ನೀರುಗಂಟಿ ಕೆಲಸ ನಿರ್ವಹಿಸುವ ದಿನಗೂಲಿ ನೌಕರರಿಗೆ ಪುರಸಭೆಯಿಂದ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿ ಪುರಸಭೆ ಅಧ್ಯಕ್ಷ, ಪೌರಾಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಯಿತು.  ಸುರೇಶ್, ಮಹದೇವ, ಪುಟ್ಟಮಾದು, ಗಣೇಶ್, ಮುರುಗನ್, ರಾಜಣ್ಣ, ಮಾದೇಶ್ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT