ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುರಸಭೆ ಮುಖ್ಯಾಧಿಕಾರಿ ದಲಿತ ವಿರೋಧಿಯಲ್ಲ: ಸ್ಪಷ್ಟನೆ

Last Updated 15 ಫೆಬ್ರುವರಿ 2011, 18:30 IST
ಅಕ್ಷರ ಗಾತ್ರ

ವಿಜಯಪುರ: ಇಲ್ಲಿನ ಪುರಸಭೆ ಮುಖ್ಯಾಧಿಕಾರಿ ಎಂ.ಆರ್.ಮಂಜುನಾಥ್ ಅವರನ್ನು ದಲಿತ ವಿರೋಧಿ ಎಂದು ಬಿಂಬಿಸಿ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಿರುವುದು ಸೂಕ್ತವಲ್ಲ ಎಂದು ಪುರಸಭಾ ಸದಸ್ಯ ಎಚ್.ಎಂ.ಕೃಷ್ಣಪ್ಪ ಸ್ಪಷ್ಟಪಡಿಸಿದ್ದಾರೆ.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಟ್ಟಣ ವ್ಯಾಪ್ತಿಯಿಂದ ಹೊರಗಿನ ಕೆಲಸಂಘಟನೆಗಳು ಸತ್ಯಾಂಶವನ್ನು ಅರಿಯದೇ ಮುಖ್ಯಾಧಿಕಾರಿ ವಿರುದ್ಧ ಸುಳ್ಳು ಆರೋಪ ಮಾಡುತ್ತಿವೆ ಎಂದು ದೂರಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮುಖ್ಯಾಧಿಕಾರಿ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿರುವ ಬಗ್ಗೆ ತಿಳಿದು ಬಂದಿದ್ದು, ನಿಷ್ಟಾವಂತ ಅಧಿಕಾರಿಯೊಬ್ಬರಿಗೆ ಅಪಮಾನ ಮಾಡುವ ಕೃತ್ಯ ಇದಾಗಿದೆ.ಪರಿಶಿಷ್ಟ ಜಾತಿಯವರಿಗೆ ಶೇ.18 ರ ನಿಧಿಯಲ್ಲಿ ಮನೆ ನಿರ್ಮಾಣದ ಅನುದಾನ ದುರುಪಯೋಗವಾಗದಂತೆ ಮುಖ್ಯಾಧಿಕಾರಿ ತಡೆದಿದ್ದಾರೆ. ಪರಿಶಿಷ್ಟ ಜಾತಿ ಅಲ್ಲದವರ ಭಾವಚಿತ್ರವನ್ನು ದಾಖಲೆಗಳಲ್ಲಿ ನಮೂದಿಸಿ ಶೇ.18ರ ಅನುದಾನವನ್ನು ದುರುಪಯೋಗಪಡಿಸಿಕೊಳ್ಳಲು ಕೆಲವರು ಯತ್ನಿಸಿದ್ದು, ಇದನ್ನು ಮುಖ್ಯಾಧಿಕಾರಿಗಳು ತಡೆದಿದ್ದರು ಎಂದರು.

ಶೇ.18 ರ ಅನುದಾನವು ದುರುಪಯೋಗಕ್ಕೆ ಯತ್ನಿಸಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಇಲ್ಲವಾದಲ್ಲಿ ವಿಜಯಪುರದ ದಲಿತಸಂಘಟನೆಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಶೀಘ್ರವೇ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸುವುದಾಗಿ ಎಂದು  ತಿಳಿಸಿದರು.

ಪುರಸಭಾ ಸದಸ್ಯ ಟಿಲ್ಲರ್ ಎಂ.ಮಂಜುನಾಥ್ ಮಾತನಾಡಿ, ಮುಖ್ಯಾಧಿಕಾರಿ ಪ.ಜಾ ಮತ್ತು ಪ.ವರ್ಗದವರು ನಡೆಸುವ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿದ್ದಾರೆಂದು ತಿಳಿಸಿದರು. ವಕೀಲ ಎ.ನಾರಾಯಣಸ್ವಾಮಿ, ಆಂಜಿನಪ್ಪ, ಕೆ.ಮುನಿರಾಜುಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT