ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಲದಿನ್ನಿಯಲ್ಲಿ ವೈರಲ್ ಜ್ವರ ಪ್ರಕರಣ: ಭೇಟಿ

Last Updated 3 ಅಕ್ಟೋಬರ್ 2012, 4:30 IST
ಅಕ್ಷರ ಗಾತ್ರ

ಸಿಂಧನೂರು: ತಾಲ್ಲೂಕಿನ ಪುಲದಿನ್ನಿ ಗ್ರಾಮದಲ್ಲಿ ವೈರಲ್ ಜ್ವರ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ತಾಲ್ಲೂಕು ವೈದ್ಯಾಧಿಕಾರಿ ಡಾ.ಹಸೇನ್ ಹುಸೇನ್ ಅವರ ನೇತೃತ್ವದಲ್ಲಿ ಮಂಗಳವಾರ ಆರೋಗ್ಯ ಸಿಬ್ಬಂದಿ ಗ್ರಾಮಕ್ಕೆ ಭೇಟಿನೀಡಿ ಪರಿಶೀಲಿಸಿತು. ಗ್ರಾಮಸ್ಥರಿಗೆ ಸ್ವಚ್ಛತೆ ಕುರಿತು ಮಾಹಿತಿ ನೀಡಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ವಿವರಿಸಿದರು.

ಗ್ರಾಮದಲ್ಲಿ ಒಟ್ಟು 14ಜನರ ರಕ್ತ ಮಾದರಿಯನ್ನು ಸಂಗ್ರಹಿಸಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. 340 ಮನೆಗಳಿಗೆ ಭೇಟಿ ಕೊಡುವ ಮೂಲಕ 21ಜನರ ರಕ್ತಲೇಪನ ಕೈಗೊಂಡು ಅಗತ್ಯ ಔಷಧೋಪಚಾರ ನಡೆಸಲಾಗಿದೆ. ಭೇಟಿಯ ಸಂದರ್ಭದಲ್ಲಿ 44 ನೀರು ಸಂಗ್ರಹಣ ತಾಣಗಳಲ್ಲಿ ಸೊಳ್ಳೆಮರಿ ಕಂಡುಬಂದಿದ್ದು, ತಕ್ಷಣ ನೀರನ್ನು ಖಾಲಿ ಮಾಡಿಸಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸೊಳ್ಳೆಗಳಿಂದ ಬರುವ ರೋಗ, ಮನೆಯ ಸುತ್ತಮುತ್ತಲು ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳಬೇಕಾದ ಬಗ್ಗೆ ಮಾಹಿತಿ ನೀಡಿ ಜಾಗ್ರತಿಗೊಳಿಸಿದರು. ಯಾವುದೇ ರೀತಿಯ ಜ್ವರ ಕಂಡುಬಂದಲ್ಲಿ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೂಕ್ತ ಚಿಕಿತ್ಸೆ ಪಡೆಯುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಾದ ಡಾ.ಅಯ್ಯನಗೌಡ, ಡಾ.ಜೀವನೇಶ್ವರಯ್ಯ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್.ಎಚ್.ದಾಸಪ್ಪನವರ್, ಆರೋಗ್ಯ ಸಂದರ್ಶಕ ಪಿ.ವೆಂಕಟೇಶ, ಹೇಮಾವತಿ, ಗೀತಾ, ಫಕೀರಚಂದ ಹಾಗೂ ಗ್ರಾಮಸ್ಥರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT