ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೂರ್ವಸಿದ್ಧತೆ ಪ್ರಶ್ನೆ ಪತ್ರಿಕೆ ಬಯಲು

Last Updated 17 ಫೆಬ್ರುವರಿ 2012, 6:00 IST
ಅಕ್ಷರ ಗಾತ್ರ

ತುರುವೇಕೆರೆ: ಸಾರ್ವಜನಿಕ ಶಿಕ್ಷಣ ಇಲಾಖೆಯ ಪರೀಕ್ಷಾ ವೇಳಾಪಟ್ಟಿಯನ್ನು ಖಾಸಗಿ ಶಾಲೆಯೊಂದು ಅನುಸರಿಸದಿ ರುವುದರಿಂದ ಜಿಲ್ಲಾಮಟ್ಟದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಉತ್ತರ ಸಹಿತ ಬಯಲಾಗಿದೆ.

ಕಳೆದ ಸೋಮವಾರದಿಂದ ಜಿಲ್ಲೆಯಾದ್ಯಂತ ಪೂರ್ವ ಸಿದ್ಧತಾ ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆಯ ಎ್ಲ್ಲಲ ವಿಷಯಗಳ ಪ್ರಶ್ನೆಪತ್ರಿಕೆಗಳು ಉತ್ತರ ಸಹಿತ ಹಿಂದಿನ ದಿನವೇ ಜೆರಾಕ್ಸ್ ಅಂಗಡಿಗಳಲ್ಲಿ ಲಭ್ಯವಾಗುತ್ತಿವೆ.

ಪ್ರಶ್ನೆಪತ್ರಿಕೆಗಳು ಪ್ರತಿಯೊಂದಕ್ಕೆ ರೂ. 100ರಂತೆ ಮಾರಾಟವಾಗುತ್ತಿದ್ದು, ವಿದ್ಯಾರ್ಥಿಗಳು ಜೆರಾಕ್ಸ್ ಅಂಗಡಿಗಳಿಗೆ ಎಡತಾಕುತ್ತಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಇತರೆ ಖಾಸಗಿ ಶಿಕ್ಷಣ ಸಂಸ್ಥೆಯ ಬಹುತೇಕ ವಿದ್ಯಾರ್ಥಿಗಳು ಪರೀಕ್ಷೆಗೆ ಮುಂಚೆಯೇ ತಮಗೆ ಉತ್ತರಸಹಿತ ಪ್ರಶ್ನೆಪತ್ರಿಕೆ ಸಿಕ್ಕಿರುವುದನ್ನು ಖಚಿತಪಡಿಸಿದರು.

ಪ್ರಜಾವಾಣಿಗೆ ಗುರುವಾರ ಸಿಕ್ಕ ಉತ್ತರ ಸಹಿತ ಪ್ರಶ್ನೆಪತ್ರಿಕೆ ಹಾಗೂ ಅದೆ ದಿನ ನಡೆದ ಇಂಗ್ಲಿಷ್ ಪ್ರಶ್ನೆಪತ್ರಿಕೆ ಪಡಿಯಚ್ಚೇ ಆಗಿದ್ದು ಪ್ರಶ್ನೆಪತ್ರಿಕೆಗಳು ಬಹಿರಂಗಗೊಂಡಿರುವುದು ಖಚಿತವಾಗಿದೆ. ತಾಲ್ಲೂಕಿನಲ್ಲಿ ಸುಮಾರು 13 ಖಾಸಗಿ ಶಾಲೆಗಳಿದ್ದು ಪಟ್ಟಣದ ಒಂದು ಖಾಸಗಿ ಶಾಲೆ ಮಾತ್ರ ಪರೀಕ್ಷಾ ವೇಳಾಪಟ್ಟಿಯನ್ನು ಅನುಸರಿಸದೆ ಹೀಗಾಗಿದೆ. ಪರೀಕ್ಷಾ ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚನೆ ನೀಡಲಾಗುವುದು ಎಂದು ಬಿಇಒ ರಂಗಧಾಮಯ್ಯ ತಿಳಿಸಿದ್ದಾರೆ.

ಸಮಾವೇಶಕ್ಕೆ ಜನತೆ
ತುಮಕೂರಿನಲ್ಲಿ ಶುಕ್ರವಾರ ಜೆಡಿಎಸ್ ಹಮ್ಮಿಕೊಂಡಿರುವ ಜನಪರ ಜಾಥಾ ಸಮಾವೇಶಕ್ಕೆ ತಾಲ್ಲೂಕಿನಿಂದ 6 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಎಂ.ಟಿ. ಕೃಷ್ಣಪ್ಪ ತಿಳಿಸಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆ ವಿರುದ್ಧ ಸಮಾವೇಶದಲ್ಲಿ ಖಂಡನಾ ನಿರ್ಣಯ ಮಂಡಿಸಿಲಾ ಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT