ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೃಥ್ವಿ-2 ಕ್ಷಿಪಣಿ ಪರೀಕ್ಷೆ ಯಶಸ್ವಿ

Last Updated 26 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಭುವನೇಶ್ವರ: ನೆಲದಿಂದ ನೆಲಕ್ಕೆ ಚಿಮ್ಮುವ 350 ಕಿ.ಮೀ ವ್ಯಾಪ್ತಿಯಲ್ಲಿ ದಾಳಿ ನಡೆಸಬಲ್ಲ ಪೃಥ್ವಿ-2 ಕ್ಷಿಪಣಿಯ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಅಣ್ವಸ್ತ್ರ ಸಾಗಿಸಬಲ್ಲ, ಸ್ವದೇಶಿ ತಂತ್ರಜ್ಞಾನದಲ್ಲಿ ನಿರ್ಮಿಸಲಾಗಿರುವ  ಒಂಬತ್ತು ಮೀಟರ್ ಉದ್ದದ ಕ್ಷಿಪಣಿಯ ಪರೀಕ್ಷೆಯನ್ನು ಸೋಮವಾರ ಒಡಿಶಾದ ಬಾಲಸೋರ್ ಜಿಲ್ಲೆಯ ಚಂಡೀಪುರದಲ್ಲಿರುವ ಮಧ್ಯಂತರ ಪರೀಕ್ಷಾ ವಲಯದಲ್ಲಿ (ಐಟಿಆರ್) ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.

ನಿಯಮಿತವಾಗಿ ನಡೆಯುವ ತರಬೇತಿ ಕಾರ್ಯಕ್ರಮದ ಭಾಗವಾಗಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ನೆರವಿನೊಂದಿಗೆ ಸಶಸ್ತ್ರ ಪಡೆಗಳು ಕ್ಷಿಪಣಿಯ ಪರೀಕ್ಷೆ ನಡೆಸಿದವು.

`ಕ್ಷಿಪಣಿಯು ಪೂರ್ವನಿರ್ಧಾರಿತ ವಾಗಿ ಬಂಗಾಳಕೊಲ್ಲಿಯ ವ್ಯಾಪ್ತಿಯಲ್ಲಿ ಗುರುತಿಸಲಾಗಿದ್ದ ಗುರಿಯನ್ನು ಹೆಚ್ಚಿನ ನಿಖರತೆಯಿಂದ ತಲುಪಿತು. ಪರೀಕ್ಷೆಯ ಎಲ್ಲಾ ಉದ್ದೇಶಗಳನ್ನು ಪೂರೈಸಿದ ಕ್ಷಿಪಣಿಯು ಕರಾರುವಕ್ಕಾಗಿ ತನ್ನ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿತು~ ಎಂದು ಐಟಿಆರ್ ನಿರ್ದೇಶಕ ಎಸ್‌ಪಿ.ದಾಸ್ ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT