ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್‌ಬಂಕ್ ಎಂದಿನಂತೆ ಕಾರ್ಯ

Last Updated 15 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಅಪೂರ್ವ ಚಂದ್ರ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತರುವಲ್ಲಿ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಸೋಮವಾರದಿಂದ (ಅ.15) ಒಂದು ಪಾಳಿಯಲ್ಲಿ ಕೆಲಸ ಮಾಡಲು ನಿರ್ಧರಿಸಿದ್ದ ಪೆಟ್ರೋಲ್ ಬಂಕ್ ಮಾಲೀಕರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

`ರಾಜ್ಯದ ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ನಮ್ಮ ನಿರ್ಧಾರಕ್ಕೆ ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ಒಂದು ಪಾಳಿಯಲ್ಲಿ ಕೆಲಸ ನಿರ್ವಹಿಸುವ ನಿರ್ಧಾರವನ್ನು ಕೈಬಿಡಲಾಗಿದೆ. ಮಂಗಳವಾರದಿಂದ ಪೆಟ್ರೋಲ್ ಬಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ~ ಎಂದು ಬೆಂಗಳೂರು ಪೆಟ್ರೋಲ್ ವಿತರಕರ ಸಂಘದ ಅಧ್ಯಕ್ಷ ಬಿ.ಆರ್.ರವೀಂದ್ರನಾಥ್ ಅವರು `ಪ್ರಜಾವಾಣಿ~ಗೆ ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT