ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೈಪ್‌ಗಳಿಗೆ ಬೆಂಕಿ: ಅಪಾರ ಹಾನಿ

Last Updated 20 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬನಹಟ್ಟಿ: ಇಲ್ಲಿಯ ಕುಡಿಯುವ ನೀರಿನ ಯೋಜನೆಗಾಗಿ ಗುತ್ತಿಗೆದಾರರು ಸಂಗ್ರಹಿಸಿಟ್ಟಿದ್ದ ಪಿವಿಸಿ ಪೈಪ್‌ಗಳಿಗೆ ಸೋಮವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ.

ನಗರದ ನೀರಿನ ಟ್ಯಾಂಕ್ ಬಳಿ ಸಂಗ್ರಹಿಸಿಡಲಾಗಿದ್ದ ಪೈಪುಗಳು ಸುಟ್ಟು ಸುಮಾರು 4 ಕೋಟಿ ರೂ. ಹಾನಿ ಯಾಗಿದೆ ಎಂದು ಅಂದಾಜಿಸಲಾಗಿದೆ. ಬೆಂಕಿ ಹತ್ತಿದ ಸ್ವಲ್ಪೇ ಹೊತ್ತಿನಲ್ಲಿ ಆಕಾಶದೆತ್ತರಕ್ಕೆ ಬೆಂಕಿ ಜ್ವಾಲೆಗಳೆದ್ದು, ದಟ್ಟ ಹೊಗೆ ಚಿಮ್ಮಲಾರಂಭಿಸಿತು. ಪಕ್ಕದಲ್ಲಿರುವ ಎರಡು-ಮೂರು ಮನೆಗಳಿಗೆ ಬೆಂಕಿ ತಗುಲಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ. ಬೆಂಕಿ ಆಕಸ್ಮಿಕಕ್ಕೆ ಕಾರಣ ತಿಳಿದುಬಂದಿಲ್ಲ.

ಬೆಂಕಿ ದುರ್ಘಟನೆ ಕುರಿತು ಜಮಖಂಡಿಯ ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದರೂ ಸುಮಾರು ಒಂದು ತಾಸಿನ ನಂತರ ಅಗ್ನಿಶಾಮಕ ದಳ ಆಗಮಿಸಿದ್ದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT