ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರಿಂದ ದೌರ್ಜನ್ಯ: ಆರೋಪ

Last Updated 25 ಜನವರಿ 2012, 6:20 IST
ಅಕ್ಷರ ಗಾತ್ರ

ಧಾರವಾಡ: “ನಿವೇಶನ ವಿವಾದಕ್ಕೆ ಸಂಬಂಧಿಸಿದ ವ್ಯಾಜ್ಯದಲ್ಲಿ ಶಹರ ಠಾಣೆ ಪೊಲೀಸ್ ಅಧಿಕಾರಿಗಳು ತಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ” ಎಂದು ದೈವಜ್ಞ ಹೌಸಿಂಗ್ ಸೊಸೈಟಿ ಅಧ್ಯಕ್ಷ ಉತ್ತಮ ಪಾಲನಕರ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

`ಈ ಕುರಿತು ಪೊಲೀಸ್ ಆಯುಕ್ತರಿಗೂ ಮನವಿ ಸಲ್ಲಿಸಲಾಗಿದೆ. ಆದರೂ ಸಹ ನಮ್ಮ ಮೇಲೆ ಪಿಐ ಟಿ.ಎಸ್.ಸುಲ್ಫಿ ಹಾಗೂ ಎಸಿಪಿ ಡಾ. ಸಂಜೀವ ಪಾಟೀಲ ಅವರು ದೌರ್ಜನ್ಯ ನಡೆಸಿದ್ದಾರೆ. ನಮ್ಮ ಜಾಗೆಯಲ್ಲಿ ಮನೆ ಕಟ್ಟಿ ಗೃಹಪ್ರವೇಶ ಮಾಡಲೂ ಸಹ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ~ ಎಂದು ಆಪಾದಿಸಿದರು.

ತಮ್ಮ ಸೊಸೈಟಿಯು ಮದಿಹಾಳ ವ್ಯಾಪ್ತಿಯಲ್ಲಿ ವಸಂತ ಕಾಳಪ್ಪ ಪತ್ತಾರ ಹಾಗೂ ರಮಜಾನಸಾಬ್ ನದಾಫ್ ಎಂಬುವರಿಗೆ 1974ರಲ್ಲಿ ನಿವೇಶನ ಖರೀದಿ ನೀಡಿದೆ. ಈ ನಿವೇಶನಕ್ಕೆ ಸಂಬಂಧಿಸಿದ ವಿವಾದ ನ್ಯಾಯಾಲಯದಲ್ಲಿದೆ. ಆದರೆ ಪಕ್ಕದಲ್ಲಿರುವ ತಮ್ಮ ನಿವೇಶನದ ಬಗ್ಗೆ ತಕರಾರು ಅರ್ಜಿ ಸಲ್ಲಿಸಲಾಗಿದೆ.

ಈ ಕುರಿತು ನ್ಯಾಯಾಲಯದ ತೀರ್ಪು ತಮ್ಮ ಪರವಾಗಿಯೇ ಇದ್ದರೂ ಸಹ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದರು.

ಗೃಹ ಪ್ರವೇಶಕ್ಕೆ ಬಂದವರಲ್ಲಿ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಈ ಪೈಕಿ ಮೂವರನ್ನು ಸೋಮವಾರ ಬಿಡುಗಡೆ ಮಾಡಿದ್ದಾರೆ ಎಂದರು.

ವಿವೇಕಾನಂದ ಪಾಲನಕರ, ಜಗದೀಶ ಪಾಲನಕರ ಪತ್ರಿಕಾಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT