ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್ ಕ್ಯಾಂಟೀನ್‌ಗೆ ಶೀಘ್ರ ಅನುಮೋದನೆ

Last Updated 21 ಅಕ್ಟೋಬರ್ 2012, 19:15 IST
ಅಕ್ಷರ ಗಾತ್ರ

ಬೆಂಗಳೂರು: `ಪೊಲೀಸ್ ಸಿಬ್ಬಂದಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ದೈನಂದಿನ ಅಗತ್ಯ ವಸ್ತುಗಳನ್ನು ಕಡಿಮೆ ಬೆಲೆಯಲ್ಲಿ ಪೂರೈಸಲು  ಮಿಲಿಟರಿ ಕ್ಯಾಂಟೀನ್‌ಗಳ ಮಾದರಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ  ಕ್ಯಾಂಟೀನ್ ಆರಂಭಿಸಲಾಗುವುದು~ ಎಂದು ಉಪಮುಖ್ಯಮಂತ್ರಿ ಆರ್.ಅಶೋಕ ಹೇಳಿದರು. ನಗರದಲ್ಲಿ ಭಾನುವಾರ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಪೊಲೀಸ್ ಸಿಬ್ಬಂದಿಗೆ ದಿನನಿತ್ಯದ ಅಗತ್ಯ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಒದಗಿಸುವುದು ಸರ್ಕಾರದ ಕನಸು~ ಎಂದರು. ಸಿಬ್ಬಂದಿಗೆ ಆರ್ಥಿಕವಾಗಿ ಹೆಚ್ಚು ಸಹಕಾರಿಯಾಗಿರುವ ಈ ಯೋಜನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಸಂಬಂಧ ಹಣಕಾಸು ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದ್ದು, ಯೋಜನೆಗೆ ಸದ್ಯದಲ್ಲೇ ಅನುಮೋದನೆ ಸಿಗಲಿದೆ. ಆದ್ಯತೆ ಮೇರೆಗೆ ತಾಲ್ಲೂಕು ಕೇಂದ್ರಗಳಲ್ಲೂ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುತ್ತದೆ ಎಂದು ತಿಳಿಸಿದರು.    ಲಾಠಿಯಿಂದ ಕಾನೂನು ಸುವ್ಯವಸ್ಥೆ ನಿಯಂತ್ರಿಸುವ ಪರಿಸ್ಥಿತಿ ಹೊರಟು ಹೋಗಿದೆ.

ಈಗಿನ ಸ್ಥಿತಿಯಲ್ಲಿ ಆಧುನಿಕ ಶಸ್ತ್ರಾಸ್ತ್ರಗಳಿಂದಷ್ಟೇ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸುವಂತಾಗಿದೆ. ರಾಜ್ಯದ ಕರಾವಳಿ ಪ್ರದೇಶದಲ್ಲಿ ಈ ಹಿಂದೆ ಪೊಲೀಸ್ ಕಾವಲು ಇರಲಿಲ್ಲ. ಸುಮಾರು 300 ಕಿ.ಮೀ ಇರುವ ಕರಾವಳಿ ಪ್ರದೇಶ ವ್ಯಾಪ್ತಿಯಲ್ಲಿ ಹೊಸದಾಗಿ ಎಂಟು ಪೊಲೀಸ್ ಠಾಣೆಗಳನ್ನು ಆರಂಭಿಸಲಾಗಿದೆ. ಆ ಭಾಗದ ಸಿಬ್ಬಂದಿಗೆ ಆಧುನಿಕ ಶಸ್ತ್ರಾಸ್ತ್ರ ಹಾಗೂ ಬೋಟ್ ಸೌಕರ್ಯ ಕಲ್ಪಿಸಲು ಪ್ರತಿ ವರ್ಷ ಠಾಣೆಯೊಂದಕ್ಕೆ 30 ಸಾವಿರ ರೂಪಾಯಿ ಅನುದಾನ ನೀಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT