ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್ ರಕ್ಷಣೆಗೆ ಆಗ್ರಹಿಸಿ ಮೌನ ಮೆರವಣಿಗೆ

Last Updated 4 ಆಗಸ್ಟ್ 2012, 7:35 IST
ಅಕ್ಷರ ಗಾತ್ರ

ಬಂಗಾರಪೇಟೆ: ತೋಟಿ ಇನಾಮ್ತಿ ಜಮೀನು ಉಳುಮೆ ಮಾಡಲು ಪೊಲೀಸ್ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ಕಳೆದ 17 ದಿನದಿಂದ ತಾಲ್ಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿರುವ ಐವಾರಳ್ಳಿ ಗ್ರಾಮದ ತೋಟಿ ನೌಕರರು, ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಸದಸ್ಯರು ಶುಕ್ರವಾರ ಮೌನ ಮೆರವಣಿಗೆ ನಡೆಸಿದರು.

ಐವಾರಳ್ಳಿ ಗ್ರಾಮದಲ್ಲಿ ತೋಟಿ ಇನಾಮ್ತಿಯಾಗಿ ವೆಂಕಟಪ್ಪ, ಗಂಟ್ಲಪ್ಪ, ಕುಪ್ಪನ್ನ ಎಂಬುವರಿಗೆ ಸರ್ಕಾರ 2.38 ಎಕರೆ ಜಮೀನು ನೀಡಿದೆ. ಆದರೆ ಅದೇ ಗ್ರಾಮದ ಪ್ರಬಲ ವ್ಯಕ್ತಿಯೊಬ್ಬರು ಈ ಜಮೀನನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದ್ದಾರೆ. ಮೂಲ ವಾರಸುದಾರರನ್ನು ತಮ್ಮ ಜಮೀನಿಗೆ ಹೋಗಲು ಬಿಡುತ್ತಿಲ್ಲ. ಉಳುಮೆ ಮಾಡಲು ಹೋದವರ ಮೇಲೆ ದೌರ್ಜನ್ಯ ಎಸಗಿ ತೊಂದರೆ ನೀಡುತ್ತಿದ್ದಾರೆ ಎಂದು ಅವರು ದೂರಿದರು.

ದಲಿತರ ಮೇಲೆ ದೌರ್ಜನ್ಯ ಎಸಗಿದವರ ವಿರುದ್ಧ ಕ್ರಮ ಜರುಗಿಸಿ, ವಾರಸುದಾರರ ಮಕ್ಕಳ ಹೆಸರಿಗೆ ಖಾತೆ ಮಾಡಿಸಬೇಕು. ಮೂಲ ವಾರಸುದಾರರಾದ ತೋಟಿಗರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾ ನಿರತರೊಂದಿಗೆ ಮಾತನಾಡಿದ ಉಪ ವಿಭಾಗಾಧಿಕಾರಿ ಅಂಜುಮ್ ಪರ್ವೇಜ್, ದಾಖಲೆಗಳನ್ನು ಪರಿಶೀಲಿಸಿ ಒಂದು ತಿಂಗಳ ಒಳಗೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT