ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋಲಿಯೊ ಅಭಿಯಾನಕ್ಕೆ ಸಿದ್ಧತೆ

Last Updated 21 ಜನವರಿ 2011, 7:15 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಪಲ್ಸ್ ಪೋಲಿಯೊ ಅಭಿಯಾನ ಯಶಸ್ವಿಗೊಳಿಸಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿದ್ಧತೆ ನಡೆಸಿದೆ.

ಜ. 23ರಂದು ಮೊದಲ ಸುತ್ತಿನ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮ ನಡೆಯ ಲಿದೆ. ಫೆ. 27ರಂದು ಎರಡನೇ ಸುತ್ತಿನ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 5 ವರ್ಷದ ವರೆಗಿನ 94,619 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.

ಚಾಮರಾಜನಗರ ತಾಲ್ಲೂಕು- 30,988, ಗುಂಡ್ಲುಪೇಟೆ- 18,014, ಕೊಳ್ಳೇಗಾಲ- 37,357 ಹಾಗೂ ಯಳಂದೂರು ತಾಲ್ಲೂಕಿನಲ್ಲಿ 8,260 ಮಕ್ಕಳಿಗೆ ಲಸಿಕೆ ಹಾಕಲಾಗುತ್ತದೆ. ಲಸಿಕೆ ಹಾಕಲು 618 ಬೂತ್ ತೆರೆಯಲಾಗುತ್ತಿದೆ. ಈ ಪೈಕಿ ಚಾಮರಾಜನಗರ ತಾಲ್ಲೂಕಿನಲ್ಲಿ 198, ಕೊಳ್ಳೇಗಾಲ- 218, ಗುಂಡ್ಲುಪೇಟೆ- 157 ಮತ್ತು ಯಳಂದೂರು ತಾಲ್ಲೂಕಿನಲ್ಲಿ 45 ಲಸಿಕಾ ಕೇಂದ್ರ ತೆರೆಯಲು ಸಿದ್ಧತೆ ಕೈಗೊಳ್ಳಲಾಗಿದೆ. ಒಟ್ಟಾರೆ ಪಟ್ಟಣ ಪ್ರದೇಶದಲ್ಲಿ 92 ಹಾಗೂ ಗ್ರಾಮೀಣ ಪ್ರದೇಶದ 526 ಕೇಂದ್ರದಲ್ಲಿ ಲಸಿಕೆ ಹಾಕಲಾಗುತ್ತದೆ.

ಜತೆಗೆ, 30 ಟ್ರ್ಸಾನ್ಸಿಟ್ ಹಾಗೂ 24 ಸಂಚಾರಿ ಕೇಂದ್ರದ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದ ಉಸ್ತುವಾರಿಗೆ 124 ಮೇಲ್ವಿಚಾರಕರು ನಿಯೋಜನೆಗೊಂಡಿದ್ದಾರೆ. ಲಸಿಕಾ ಕೇಂದ್ರದಲ್ಲಿ ಲಸಿಕೆ ಹಾಕು ವುದು ಸೇರಿದಂತೆ ಇತರೇ ಕಾರ್ಯಗಳಿಗೆ 2,580 ಲಸಿಕಾ ಕಾರ್ಯಕರ್ತರು ನೇಮಕವಾಗಿದ್ದಾರೆ.

ಜಿಲ್ಲೆಗೆ 1,18,424 ಡೋಸ್ ಪೋಲಿಯೊ ಲಸಿಕೆ ಆವಶ್ಯಕತೆಯಿದೆ. ಇದರ ಸರಬರಾಜಿಗೆ ವ್ಯವಸ್ಥೆ ಮಾಡಲಾಗಿದೆ. ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೊದಲ ದಿನದಂದು ಲಸಿಕಾ ಕೇಂದ್ರಗಳಲ್ಲಿ ಮಕ್ಕಳಿಗೆ ಲಸಿಕೆ ಹಾಕಲಾಗುತ್ತದೆ.

ಗ್ರಾಮಾಂತರ ಪ್ರದೇಶದಲ್ಲಿ ಎರಡನೇ ಹಾಗೂ ಮೂರನೇ ದಿನ ಮನೆ ಮನೆಗೆ ತೆರಳಿ ಲಸಿಕೆ ಹಾಕಲಾಗುತ್ತದೆ. ಪಟ್ಟಣ, ನಗರ ಪ್ರದೇಶದಲ್ಲಿ ನಾಲ್ಕನೇ ದಿನವೂ ಮನೆಗಳಿಗೆ ತೆರಳಿ ಮಕ್ಕಳಿಗೆ ಲಸಿಕೆ ಹಾಕಲಾಗುತ್ತದೆ. ಪಟ್ಟಣ ಪ್ರದೇಶದಲ್ಲಿ 29,463 ಮನೆ ಮತ್ತು ಗ್ರಾಮೀಣ ಪ್ರದೇಶದ 1,74,557 ಮನೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 2,04,020 ಮನೆಗಳಿಗೆ ಭೇಟಿ ನೀಡಿ ಲಸಿಕೆ ಹಾಕಲು ಸಿಬ್ಬಂದಿ ಸಜ್ಜಾಗಿದ್ದಾರೆ. ಬಸ್‌ನಿಲ್ದಾಣ, ಜನಸಂದಣಿ ಸ್ಥಳಗಳಲ್ಲಿ ಲಸಿಕಾ ಕೇಂದ್ರ ತೆರೆಯಲಾಗುತ್ತಿದೆ.

ಪಲ್ಸ್ ಪೋಲಿಯೊ ಅಭಿಯಾನಕ್ಕೆ ಅವಶ್ಯವಿರುವ ವಾಹನ ವ್ಯವಸ್ಥೆಗಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಗಳಿಗೆ ಜಿಲ್ಲಾಡಳಿತ ಸೂಚಿಸಿದೆ. ಕಾರ್ಯಕ್ರಮ ಭಾನುವಾರ ಇರುವ ಹಿನ್ನೆಲೆಯಲ್ಲಿ ಅಗತ್ಯವಿರುವ ಕಡೆ ಲಸಿಕಾ ಕೇಂದ್ರ ತೆರೆಯಲು ನಿರ್ಧರಿಸಲಾಗಿದೆ.

ಜಿಲ್ಲಾ ವ್ಯಾಪ್ತಿಯ ನರ್ಸಿಂಗ್ ಶಾಲೆ, ಸ್ವಯಂ ಸೇವಾ ಸಂಸ್ಥೆಗಳಿಗೆ ಅಭಿಯಾನದೊಂದಿಗೆ ಕೈಜೋ ಡಿಸಲು ಮನವಿ ಮಾಡಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಪೌರಾಯುಕ್ತರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಜನಪ್ರತಿ ನಿಧಿಗಳು, ಆಶಾ ಕಾರ್ಯಕತೆಯರು, ನರ್ಸಿಂಗ್ ವಿದ್ಯಾರ್ಥಿಗಳು, ಆರೋಗ್ಯ ಇಲಾಖೆಯ ಸಿಬ್ಬಂ ದಿಯ ಸಮನ್ವಯ ಹಾಗೂ ಸಹಕಾರದೊಂದಿಗೆ  ಗುರಿ ಸಾಧನೆಗೆ ಸಿದ್ಧತೆ ಕೈಗೊಳ್ಳಲಾಗಿದೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯ ಮೊಬೈಲ್ 94498 43047 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT