ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

Last Updated 23 ಜನವರಿ 2011, 19:35 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಪಲ್ಸ್ ಪೋಲಿಯೊ ದಿನದ ಪ್ರಯುಕ್ತ ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಮತ್ತು ಪ್ರಮುಖ ಸ್ಥಳಗಳಲ್ಲಿ ಐದು ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಲಾಯಿತು. ಮಾರುಕಟ್ಟೆ, ಬಸ್ ನಿಲ್ದಾಣ,ಪ್ರಮುಖ ರಸ್ತೆಗಳಲ್ಲಿ ಪೋಲಿಯೊ ಲಸಿಕೆ ಹಾಕುವ ಬೂತ್‌ಗಳನ್ನು ತೆರೆಯಲಾಗಿತ್ತು. ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕೇಂದ್ರದ ಸಹಾಯಕರು ಮಕ್ಕಳಿಗೆ ಲಸಿಕೆ ಹಾಕಿದರು.

ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಚಾಲನೆ ನೀಡಲಾಯಿತು.ಶಾಸಕ ಕೆ.ಪಿ.ಬಚ್ಚೇಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಟಿ.ಡಿ.ಪವಾರ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪೋಲಿಯೊ ಲಸಿಕೆ ಕಾರ್ಯಕ್ರಮ ರಾಷ್ಟ್ರೀಯ ಅಭಿಯಾನ.ಪ್ರಮುಖ ಸ್ಥಳಗಳಲ್ಲಿ, ರಸ್ತೆಗಳಲ್ಲಿ ಮತ್ತು ಬೀದಿಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ.ಮೂರು ದಿನಗಳ ಕಾಲ ವೈದ್ಯಕೀಯ ಸಿಬ್ಬಂದಿ, ಆರೋಗ್ಯ ಸಹಾಯಕರು ಮನೆ ಮನೆಗೆ ತೆರಳಲಿದ್ದಾರೆ. ಪ್ರತಿಯೊಬ್ಬ ಮಗುವಿಗೂ ಲಸಿಕೆ ಹಾಕಲಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸುತ್ತಾರೆ.

ಪ್ರತಿಯೊಂದು ಮಗುವಿಗೂ ಲಸಿಕೆ ಹಾಕುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಎನ್.ಬೈರಾರೆಡ್ಡಿ ತಿಳಿಸಿದರು.ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಬಿ.ವಿ.ಮಂಜುನಾಥ್, ಆರೋಗ್ಯ ಇಲಾಖೆಯ ಡಾ.ವೆಂಕಟೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮೋಹನ್ ಬಾಬು, ಡಾ.ಐ.ಎಸ್.ರಾವ್, ರಾಮಚಂದ್ರ, ಬಿಜೆಪಿ ಮಹಿಳಾ ಘಟಕದ ಸುಜಾತಾ ಭೂಷಣ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT