ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜ್ಞೆ ಬೆಳೆಸಲು ಎನ್‌ಎಸ್‌ಎಸ್ ಸಹಕಾರಿ

Last Updated 12 ಜನವರಿ 2012, 8:50 IST
ಅಕ್ಷರ ಗಾತ್ರ

ಬೀದರ್: ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಪ್ರಜ್ಞೆ ಬೆಳೆಸಲು ಎನ್.ಎಸ್.ಎಸ್. ಶಿಬಿರಗಳು ಪೂರಕವಾಗಿವೆ ಎಂದು ಪದವಿಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಯಲ್ಲಪ್ಪ ದಶವಂತರ ನುಡಿದರು.

ನಾರ್ಮಾ ಫೆಂಡ್ರಿಕ್ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯವು ತಾಲ್ಲೂಕಿನ ಮರ್ಜಾಪುರ (ಗವಿ) ಗ್ರಾಮದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಶಿಸ್ತು, ಸಂಯಮ ಹಾಗೂ ಸಮಯಪ್ರಜ್ಞೆ ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಕಾಲೇಜಿನ ಉಪಾಧ್ಯಕ್ಷ ನೆಲ್ಸನ್ ಸುಮಿತ್ರಾ, ಮುಖ್ಯಗುರು ಬಿ.ಕೆ. ಸುಂದರರಾವ, ಪ್ರಮುಖರಾದ ಸ್ಟ್ಯಾನ್ಲಿ ಜಾನ್, ಮನೋಶಾಂತ ಮತ್ತಿತರರು ಉಪಸ್ಥಿತರಿದ್ದರು. ಪ್ರಾಚಾರ್ಯ ನಲೀನಕುಮಾರ ಎಸ್. ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ ಆರ್. ವಿಜಯಕುಮಾರ ನಿರೂಪಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT