ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ

Last Updated 8 ಫೆಬ್ರುವರಿ 2012, 20:10 IST
ಅಕ್ಷರ ಗಾತ್ರ

ಬೆಂಗಳೂರು: ಸದನದಲ್ಲೇ `ಬ್ಲೂ ಫಿಲಂ~ ವೀಕ್ಷಿಸಿದ ಮಾಜಿ ಸಚಿವರನ್ನು ಶಾಸಕ ಸ್ಥಾನದಿಂದಲೇ ಅನರ್ಹಗೊಳಿಸುವಂತೆ ಒತ್ತಾಯಿಸಿ ವಿಧಾನಸೌಧದ ಆವರಣದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆ ಎದುರು ಗುರುವಾರ ದಿನವಿಡೀ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ರಾಜ್ಯವ್ಯಾಪಿ ಪ್ರತಿಭಟನೆ ನಡೆಸುವುದಕ್ಕೆ ಶಾಸಕರು ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಿಗ್ಗೆ 9 ಗಂಟೆಗೆ ಮತ್ತೆ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಸಭೆಯ ಬಳಿಕ ಕೆಂಗಲ್ ಹನುಮಂತಯ್ಯ ಪ್ರತಿಮೆ ಎದುರು ಪ್ರತಿಭಟನೆ ನಡೆಸುವ ನಿರ್ಧಾರ ಕೈಗೊಳ್ಳಲಾಗಿದೆ.

ಸಮಿತಿಗೆ ಸಹಕಾರ ಇಲ್ಲ- ಸಿದ್ದರಾಮಯ್ಯ
ಬೆಂಗಳೂರು: `ಅಶ್ಲೀಲ ಚಿತ್ರ ವೀಕ್ಷಣೆ ಸಂಬಂಧ ಮೂವರು ಸಚಿವರು ರಾಜೀನಾಮೆ ನೀಡಿದ್ದು, ಈ ಪ್ರಕರಣದ ತನಿಖೆಗೆ ಸ್ಪೀಕರ್ ಏಕಪಕ್ಷೀಯವಾಗಿ ನೇಮಿಸಿರುವ ವಿಚಾರಣಾ ಸಮಿತಿಗೆ ನಮ್ಮ ಸಹಕಾರ ಇಲ್ಲ~ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ವಿಧಾನಸಭೆ ಅಧಿವೇಶನ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, `ಚರ್ಚೆಗೆ ಅವಕಾಶ ನೀಡದೆ ವಿಚಾರಣಾ ಸಮಿತಿ ರಚಿಸಲಾಗಿದೆ. ಇದರ ಅಧ್ಯಕ್ಷರಾಗಿ ಪ್ರತಿಪಕ್ಷಗಳ ಸದಸ್ಯರು ಅಥವಾ ಪಕ್ಷೇತರರನ್ನು ನೇಮಿಸುವಂತೆ ಮನವಿ ಮಾಡಲಾಗಿತ್ತು. ಆದರೆ, ಇದಕ್ಕೆ ಸ್ಪೀಕರ್ ಒಪ್ಪಲಿಲ್ಲ. ಹೀಗಾಗಿ ಈ ಸಮಿತಿಗೆ ನಮ್ಮ ಸಹಕಾರ ಇರುವುದಿಲ್ಲ. ಇದೊಂದು ಕಣ್ಣೊರೆಸುವ ತಂತ್ರ~ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT