ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಭೆ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕಿವಿಮಾತು

Last Updated 18 ಫೆಬ್ರುವರಿ 2012, 19:50 IST
ಅಕ್ಷರ ಗಾತ್ರ

ಹೊಸಕೋಟೆ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಪ್ರತಿಭೆ ಬೆಳಸಿಕೊಂಡು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆದರೆ ಯಶಸ್ಸು ಗಳಿಸಲು ಸಾಧ್ಯ ಎಂದು ಶಿಕ್ಷಣ ತಜ್ಞ ಡಾ.ಕೆ.ಪಿ.ಪುತ್ತೂರಾಯ ಹೇಳಿದರು.

ಇಲ್ಲಿನ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಶನಿವಾರ ಮಾತನಾಡಿದ ಅವರು. `ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ, ಮೌಲ್ಯಗಳನ್ನು ಜೀವನದಲ್ಲಿ ಬೆಳಸಿಕೊಳ್ಳಬೇಕು~ ಎಂದು ಅವರು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಚಿವ ಬಿ.ಎನ್.ಬಚ್ಚೇಗೌಡ ಮಾತನಾಡಿ ತಾಲ್ಲೂಕಿನ ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದ ಬಳಿ ಐಟಿಐ ಕಾಲೇಜು ತೆರೆಯಲು ಉದ್ದೇಶಿಸಲಾಗಿದೆ ಎಂದು. ಪ್ರಾಂಶುಪಾಲ ಕೆ.ರಾಮಕೃಷ್ಣಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸಿ.ರುದ್ರಾರಾಧ್ಯ, ರೇಷ್ಮೆ ಬೆಳೆಗಾರರ ಸಂಘದ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಉಪಸ್ಥಿತರಿದ್ದರು. ಮಾಂತೇಶ್ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT